ಯುವ ಸಮುದಾಯ ಉದ್ಯಮ ಆರಂಭಿಸಲು ಮುಂದಾಗಬೇಕು: ಸೋಮಶೇಖರ
Youth community should take initiative to start businesses: Somashekar
ಬಳ್ಳಾರಿ 29: ಯುವ ಸಮುದಾಯ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಉದ್ಯಮ ಆರಂಭಿಸುವಂತರಾಗಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ಹೇಳಿದರು.
ಗುರುವಾರ, ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಠಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ 10 ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಳ್ಮೆ, ಆತ್ಮವಿಶ್ವಾಸ, ಧೈರ್ಯದಿಂದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವ ಮೂಲಕ ಆರ್ಥಿಕವಾಗಿ ಬೆಳೆಯಬೇಕು. ಬಳಿಕ ಇತರರಿಗೂ ಉದ್ಯೋಗ ನೀಡಲು ಮುಂದಾಗಬೇಕು ಎಂದು ಮಾರ್ಗದರ್ಶನ ನೀಡಿದರು.
ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಶ್ಯಾಮ್ ಅವರು ಮಾತನಾಡಿ, ಒಂದು ಉದ್ಯಮ ಸ್ಥಾಪಿಸಲು ಸಾಲ ಪಡೆದುಕೊಂಡು ಸರಿಯಾಗಿ ಮರುಪಾವತಿ ಮಾಡಿದರೆ ಇನ್ನೂ ಹೆಚ್ಚಿನ ಸಾಲ ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದರು
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎಚ್ ಎರಿಮನಿ ಅವರು ಮಾತನಾಡಿ, ಕಾರ್ಯಕ್ಷೇತ್ರದಲ್ಲಿ ಪರಿಪೂರ್ಣತೆಯಿಂದ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಕೆಎಸ್‌ಐಡಿಸಿ ಎಜಿಎಂ ಮಲ್ಲಿಕಾರ್ಜುನ, ಸಂಸ್ಥೆಯ ಉಪನ್ಯಾಸಕರಾದ ಜಡೇಶ, ದಿನೇಶ ಕುಮಾರ, ಸಿದ್ದಲಿಂಗಮ್ಮ, ಸಂತೋಷ ಕುಮಾರ, ಪರಮೇಶ ಹಾಗೂ ಯಶಸ್ವಿ ಉದ್ಯಮಿಗಳು ಮತ್ತು 30 ಜನ ಶಿಬಿರಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 