ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
Youth conference and state youth award program held on the occasion of Swami Vivekananda Jayanti
ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಮೂಡಲಗಿ 22 : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಮೂಡಲಗಿ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಪಟ್ಟಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ 12 ವರ್ಷಗಳಿಂದ ಗ್ರಾಮೀಣ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 - 25ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜ್ಯದ 31ಜಿಲ್ಲೆಯ ಸಮಾಜ ಸೇವಕರನ್ನು ಗುರುತಿಸಿ, ಗೌರವಿಸಲಾಗಿದ್ದು ಬೆಳಗಾವಿ ಜಿಲ್ಲೆಯಿಂದ ಸುಭಾಸ್ ಗೊಡ್ಯಾಗೋಳ ಪ್ರಶಸ್ತಿ ಪಡೆದುಕೊಂಡರು. ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಪುತ್ತೂರು ಶಾಸಕಿ ಭಾಗೀರಥಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಬಾಲಾಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಜಿಲ್ಲಾಧ್ಯಾಕ್ಷ ಸಿದ್ದಣ್ಣ ದುರದುಂಡಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುಧೀರ ನಾಯರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 