ಗಿಡ, ಪ್ರಾಣಿ, ಪಕ್ಷಿ ಪರಿಸರ ಸಮತೋಲನಕ್ಕೆ ಸಹಕಾರಿ-ಯುವಚಿಂತನಾ ಸಮಾವೇಶ
Youth-oriented conference to help balance the environment of plants, animals and birds
ಧಾರವಾಡ 16: ಗಿಡ , ಮರ, ಪ್ರಾಣಿ ಮತ್ತು ಪಕ್ಷಿಗಳು ಪ್ರಕೃತಿಯ ಅವಿಭಾಜ್ಯ ಅಂಗ, ಇವು ಪರಿಸರ ಸಮತೋಲನಕ್ಕೆ ಸಹಕಾರಿಯಾಗಿವೆ ಯುವಚಿಂತನಾ ಸಮಾವೇಶದ ಸರ್ವಾಧ್ಯಕ್ಷರಾದ ಸುನೀಲ ಬಾಗೇವಾಡಿ ಹೇಳಿದರು.ಅವರು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಧಾರವಾಡ, ಕಲಾಸ್ಪಂದನ ಹಾವೇರಿ, ಹಾಗೂ ಸರ್ಕಾರಿ ಪ್ರೌಢಶಾಲೆ ಹಿರೇಬಾಸೂರು ಇವರ ಸಂಯುಕ್ತ ಆಶ್ರಯದಲ್ಲಿ ಯುವ ಚಿಂತನಾ ಸಮಾವೇಶದ ಪ್ರಯುಕ್ತ ಉತ್ತರಕನ್ನಡ, ಧಾರವಾಡ,ಹಾವೇರಿ ಜಿಲ್ಲೆಯ ವಿವಿಧ 17 ಕಾಲೇಜುಗಳಲ್ಲಿ ಮತ್ತು ಸಂಘ-ಸಂಸ್ಥೆಗಳಲ್ಲಿ ನಡೆಯುವ ಸಾಂಸ್ಕೃತಿಕ, ಜಾಗೃತ ಕಾರ್ಯಕ್ರಮಗಳ ಅಂಗವಾಗಿ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಏರಿ್ಡಸಿದ್ದ ಪಕ್ಷಿಗಳು ಪರಿಸರದ ಆಧಾರ ಸ್ತಂಭ ಉಪನ್ಯಾಸ ಕಾರ್ಯಕ್ರಮ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ನಡೆಸುವಂತಾಗಬೇಕಾದರೆ ಪರಿಸರ ಸಮತೋಲನದಿಂದ ಕೂಡಿರಬೇಕು. ಪರಿಸರ ಸಂರಕ್ಷ ಣೆ ಮಾಡಿದಾಗ ಉತ್ತಮ ಜೀವನ ನಡೆಸಬಹುದು. ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆಯ ಪ್ರಧಾನ ಗುರುಗಳಾದ ಬಸಪ್ಪ ಕೊರಗರ ಮಾತನಾಡಿ ಪಾಲಕರು ಮತ್ತು ಪೋಷಕರ ಶಾಲಾ ಅಭಿವೃದ್ಧಿಯಲ್ಲಿ ಅವರ ಪಾತ್ರ ಹಾಗುಇ ಪಾಲುದಾರರ ಪಾತ್ರದ ಕುರಿತು ವಿಷಯ ಹಂಚಿಕೊಂಡರು.ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪಕ್ಷಿಮಿತ್ರ ಪ್ರಕಾಶ ಗೌಡರ ಅವರು ಪಕ್ಷಿಗಳು ಪರಿಸರದ ಆಧಾರ ಸ್ಥಂಭ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿ ಅರಣ್ಯ ಸಂಪತ್ತು ಹಲವಾರು ಕಾರಣಗಳಿಂದ ಕಡಿಮೆಯಾಗುತ್ತಿದೆ. ಇದರಿಂದ ಪಕ್ಷಿಗಳ ಸಂತತಿಗೆ ಕುತ್ತು ಬಂದಿದೆ. ಪರಿಸರ ಸಂರಕ್ಷಣೆಗೆ ಮುನುಕುಲ ನಿಷ್ಕಾಳಜಿ ತೋರುತ್ತಿದೆ. ಮುಂದಿನ ಜನಾಂಗಕ್ಕೆ ಪಕ್ಷಿಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರೌಢಶಾಲೆ ಹಿರೇಬಾಸೂರಿನ ಎಸ್.ಡಿ ಎಂ.ಸಿ ಅಧ್ಯಕ್ಷರಾದ ಅಜ್ಜಪ್ಪ ಬಣಕಾರ, ಸಾಹಿತಿಗಳು ಸಂಘಟಕರಾದ ಮಾರ್ತಾಠಪ್ಪ ಕತ್ತಿ, ಕಲಾಸ್ಪಂದನ ಹಾವೇರಿಯ ಕೋಶ ದಕ್ಷರಾದ ಜಗದೀಶ ಕತ್ತಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿಯ ಸದಸ್ಯರು, ಪಾಲಕರು, ವಿದ್ಯಾರ್ಥಿಗಳು ಮತ್ತು ಗ್ರಾಮ ಪಂಚಾಯತ ಸದಸ್ಯರು ಹಾಗೂ ಶಿಕ್ಷಕರು, ಸಿಬ್ಬಂದಿ ವರ್ಷದ ದವರು ಇದ್ದರು.ವಿದ್ಯಾರ್ಥಿನಿ ಪ್ರತಿಭಾ ಸಂಗಹಡಿಗರು ಪ್ರಾರ್ಥಿಸಿದರು, ಶಿಕ್ಷಕರ ಎಸ್ ಎಮ್ ಕ್ವಾರಡಿ ನಿರೂಪಿಸಿದರು. ಚಂದ್ರಸೇಖರ ಬಣಕಾರ ಸ್ವಾಗತಿಸಿದರು, ಬಿ ಎಸ್ ಆರಿಕಟ್ಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 