ಯುವನಿಧಿ ಯೋಜನೆಯ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ ಯುವಕರು ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಿ : ಬಿ.ಬಿ.ಅಸೂಟಿ
Youth should make good use of the facilities of the Youth Fund and develop their skills: B.B. Asuti
ಗದಗ 4: ಯುವಕರಲ್ಲಿ ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಸಹಕರಿಸುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಯುವನಿಧಿ ಯೋಜನೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.
ರಾಜ್ಯ ಸರ್ಕಾರ 2023 ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆಯೇ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ಮಾಸಿಕ ಭತ್ಯೆಯನ್ನು ಗರಿಷ್ಟ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಗದಗ ಜಿಲ್ಲೆ ಶೇಕಡ 99.79ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯುವಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಗ್ಯಾರಂಟಿ ಸಮಿತಿಯ ಕಚೇರಿಗಳಿಗೆ ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಗ್ಯಾರಂಟಿ ಯೋಜನೆಗಳ ಸಮೀಕ್ಷೆಯನ್ನು ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡಿದ್ದು ಗದಗ ಜಿಲ್ಲೆಯು ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂಬ ವಿಷಯವು ಎಲ್ಲರೂ ಹೆಮ್ಮೆಪಡುವಂತಹದ್ದಾಗಿದೆ ಎಂದು ಬಿ.ಬಿ.ಅಸೂಟಿ ತಿಳಿಸಿದರು.
ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ ಮಾತನಾಡಿ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವುದು ಹಾಗೂ ಯೋಜನೆಯ ಸದ್ಭಳಕೆ ಮಾಡಿಕೊಳ್ಳುವುದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ. ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಾಲಕ್ಕೆ ತಕ್ಕಂತೆ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಹಾಗೂ ಸ್ವಯಂ ಉದ್ಯೋಗ, ಯುವನಿಧಿ ಯೋಜನೆಯ ಮಾಹಿತಿಗಾಗಿ ಇಂತಹ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಆನಂದ ಹೊಂಬಳ ಅವರು ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಹಾಗೂ ಸ್ವಯಂ ಉದ್ಯೋಗ, ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಡಿ.ಕರಿಗಾರ ಅವರು ಮಾತನಾಡಿ ಯುವನಿಧಿ ಯೋಜನೆಯ ಕುರಿತು ಕಾರ್ಯಾಗಾರವು ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಗದಗ ತಾಲೂಕು ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿದ್ಯಾಧರ ದೊಡಮನಿ, ಉದ್ಯೋಗ ವಿನಿಮಯ ಅಧಿಕಾರಿ ಬಸವಂತಪ್ಪ ಪಿ. ಮೆಹಬೂಬ ಅರೀಫ್ ಸೇರಿದಂತೆ ಕಾಲೇಜಿನ ಶಿಕ್ಷಕ ವೃಂದದವರು, ಸಿಬ್ಬಂದಿಗಳು, ಕಾಲೇಜಿನ ವಿದ್ಯಾರ್ಥಿನಿಯರು ಹಾಜರಿದ್ದರು. ಎಸ್.ಯು. ಸಜ್ಜನಶೆಟ್ಟರ್ ಕಾರ್ಯಕ್ರಮ ನಿರೂಪಿದರು. ತೇಜಸ್ವಿನಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 