ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ
Yuvanidhi Yojana Introduction Program for Students
ಕೊಪ್ಪಳ 11 : ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೋಡಲ್ ಅಧಿಕಾರಿ ಶಿವಯೋಗಿ ಹೊಸಹಳ್ಳಿ ಅವರು ವಿದ್ಯಾರ್ಥಿ ಓದುಗರಿಗೆ ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ, ಯೋಜನೆಯ ಫಲಾನುಭವಿಗಳಾಗಬೇಕಾದರೆ ಇರುವ ಅರ್ಹತೆಗಳ ಕುರಿತು ಯುವನಿಧಿ ಯೋಜನೆಯ ಕುರಿತು ಒಟ್ಟಾರೆಯಾಗಿ ಪರಿಚಯಿಸಿದರು. ಪರಿಚಯ ಮಾಡಿಕೊಟ್ಟ ನಂತರ ಓದುಗರು ಯುವನಿಧಿ ಕುರಿತು ಪ್ರಶ್ನೆಗಳನ್ನು ಕೇಳಿದರು. ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲಾಯಿತು.
2023, 2024 ಹಾಗೂ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯವಾಣಿ 18005997154 ಸಂಪರ್ಕಿಸಲು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರ್ಪ ಉಪಸ್ಥಿತರಿದ್ದರು. ಗ್ರಂಥಾಲಯ ಸಹಾಯಕ ನಾಗರಾಜ ನಾಯಕ ಡಿ.ಡೊಳ್ಳಿನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗ್ರಂಥಾಲಯ ಸಹಾಯಕಿ ವಿಜಯಲಕ್ಷ್ಮೀ ವಡ್ಡಟ್ಟಿ ಸ್ವಾಗತಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 