ಮಹಾತ್ಮ ಗಾಂಧೀಜಿ 156ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಕರೆ
ZP CEO Mohammed Harris Sumair's address at the 156th birth anniversary celebration of Mahatma Gandh
ಮಹಾತ್ಮ ಗಾಂಧೀಜಿ 156ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಕರೆ
ಬಳ್ಳಾರಿ 02: ಪ್ರತಿಯೊಬ್ಬರೂ ಸತ್ಯ-ಅಹಿಂಸಾ ಮಾರ್ಗದಲ್ಲಿ ನಡೆಯೋಣ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 156ನೇ ಜಯಂತ್ಯೋತ್ಸವದ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಗಾಂಧಿ ಭವನದಲ್ಲಿ ಗುರುವಾರ ಏರಿ್ಡಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಯುವ ಪೀಳಿಗೆಯು ಉತ್ತಮ ಶಿಕ್ಷಣ ಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ದೊರಕಿಸಿಕೊಟ್ಟವರು. ಮಹಾತ್ಮ ಗಾಂಧೀಜಿ ಅವರು ‘ನನ್ನ ಜೀವನವೇ ನನ್ನ ಸಂದೇಶ’ ಎಂದು ಮತ್ತು ಲಾಲ್ ಬಹದ್ದೂರು ಶಾಸ್ತ್ರೀ ಅವರು ‘ಜೈ ಜವಾನ್, ಜೈ ಕಿಸಾನ್’ ಎಂದು ಹೇಳಿದ್ದಾರೆ. ಈ ಇಬ್ಬರು ಮಹಾನ್ ನಾಯಕರ ಆದರ್ಶ ಪಾಲನೆ ಮಾಡಿದರೆ ನಾವು ಉತ್ತಮ ಸಮಾಜ ನಿರ್ಮಾಣ ಮಾಡಬಹುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಮಹನೀಯರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯೋಣ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಬಳ್ಳಾರಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸ್ವಾತಂತ್ರ್ಯ ಹೋರಾಟಕ್ಕೆ ಅವರು ಧುಮುಕುವ ಮುನ್ನಾ ದೇಶದ್ಯಾಂತ ಸಂಚರಿಸಿ, ಜನಸಾಮಾನ್ಯರನ್ನು ಭೇಟಿಯಾಗಲು ನಿರ್ಧರಿಸಿದ್ದರು. ಅದರಂತೆ, ಅವರು 1921ರ ಅ.01ರಂದು ಪ್ರಥಮ ಬಾರಿಗೆ ಬಳ್ಳಾರಿಗೆ ಭೇಟಿ ನೀಡಿದ್ದರು, ಆ ಸಂದರ್ಭದಲ್ಲಿ ಬಳ್ಳಾರಿ ರೈಲು ನಿಲ್ದಾಣದಲ್ಲಿ ಒಂದು ರಾತ್ರಿ ನಿದ್ರಿಸಿ ಮರು ದಿನ ಧಾರವಾಡಕ್ಕೆ ಪ್ರಯಾಣಿಸಿದುದ್ದನ್ನು ನಾವು ಸ್ಮರಿಸಬಹುದಾಗಿದೆ ಎಂದರು.
ಬಾಪೂಜಿಯವರು, 1934ರ ಮಾ.03ರಂದು ಸ್ವಾತಂತ್ರ್ಯ ಹೋರಾಟಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಣೆಗಾಗಿ ಎರಡನೇ ಬಾರಿ ಬಳ್ಳಾರಿಗೆ ಆಗಮಿಸಿದ್ದರು ಹಾಗೂ ಇಲ್ಲಿಂದ ಸಂಡೂರಿಗೆ ಸಹ ಪ್ರಯಾಣಿಸಿ, ಅಲ್ಲಿರುವ ಪರಿಶಿಷ್ಟರಿಗೆ ಕುಮಾರಸ್ವಾಮಿ ದೇವಸ್ಥಾನದ ಪ್ರವೇಶಕ್ಕೆ ಅಂದಿನ ಘೋರೆ್ಡ ರಾಜಮನೆತನ ಅವಕಾಶ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿದ್ದರು ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 