ಲಘು ವಾಹನ ಚಾಲನಾ ತರಬೇತಿ ಉದ್ಘಾಟಿಸಿ ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಕರೆ
ZP Deputy Secretary Shashikant Shivapure inaugurated the light vehicle driving training
ಲಘು ವಾಹನ ಚಾಲನಾ ತರಬೇತಿ ಉದ್ಘಾಟಿಸಿ ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಕರೆ
ಬಳ್ಳಾರಿ 24: ಮಹಿಳೆಯರಿಗೆ ಸಮಾನತೆ ಇದ್ದು, ಸರ್ಕಾರದ ವಿವಿಧ ಯೋಜನೆಗಳು ಬಳಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನೆಡೆಯಬೇಕು ಎಂದು ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಕರೆ ನೀಡಿದರು. ಶುಕ್ರವಾರ, ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಎನ್‌ಆರ್‌ಎಲ್‌ಎಂ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ವಾಹನಗಳಿಗೆ ಎಸ್‌ಎಚ್‌ಜಿ ಮಹಿಳೆಯರಿಗೆ ಹಾಗೂ ಪುರುಷರಿಗೆ ನಾಲ್ಕು ಚಕ್ರದ ಲಘು ವಾಹನ ಚಾಲನಾ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಗಳಿಗೆ ವಾಹನ ಚಾಲಕಿಯರನ್ನಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಧೈರ್ಯದಿಂದ ವಾಹನ ಚಲಾಯಿಸುವ ತರಬೇತಿಯನ್ನು ಆಸಕ್ತಿ ವಹಿಸಿ ಕಲಿಯಬೇಕು ಎಂದು ಆಶಿಸಿದರು. ಯುವಕರು ಸಹ ಜೀವನ ನಿರ್ವಹಣೆಗಾಗಿ ಲಘು ವಾಹನಾ ಚಾಲನೆಯನ್ನು ಸ್ವ-ಉದ್ಯೋಗವನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 