ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ ಸಿಇಓ ಭುನೇಶ ಪಾಟೀಲ ಅವರ ಅನೀರೀಕ್ಷಿತ ಭೇಟಿ, ಪರೀಶೀಲನೆ
Zilla Panchayat CEO Bhunesh Patil makes an unexpected visit to PUC examination centers and inspects
ಧಾರವಾಡ 03: ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.
ಅವರು ಇಂದು (ಮಾ.3) ಬೆಳಿಗ್ಗೆ ಧಾರವಾಡ ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ, ನಂತರ ಜಿಲ್ಲಾ ಪಂಚಾಯತ 3 ನೇ ಮಹಡಿಯಲ್ಲಿ ಸ್ಥಾಪಿಸಿರುವ, ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ನೇರ ವೀಕ್ಷಣೆಗೆ ಇರುವ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 43 ಪರೀಕ್ಷಾ ಕೇಂದ್ರಗಳ ಚಟುವಟಿಕೆಗಳನ್ನು ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ಮೂಲಕ ವೀಕ್ಷಿಸಲಾಗುತ್ತಿದೆ. ಇಂದು ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಜಿಲ್ಲಾ ಪಂಚಾಯತ ಕಚೇರಿಯ ಮೂರನೇ ಮಹಡಿಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯಿಂದಲೇ ಎಲ್ಲಾ 43 ಕೇಂದ್ರಗಳ ವೆಬ್ ಕಾಸ್ಟಿಂಗ್ ಅನ್ನು ಮಾನಿಟರಿಂಗ್ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಎಲ್ಲಾ ಕೇಂದ್ರಗಳಲ್ಲಿಯೂ ಶಾಂತಿಯುತ ಮತ್ತು ಸುವ್ಯವಸ್ಥಿತ ವಾತಾವರಣದಲ್ಲಿ ಯಾವುದೇ ಗೊಂದಲವಿಲ್ಲದೆ ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮತ್ತು ನಿರ್ಭಯವಾಗಿ ಪರೀಕ್ಷೆಯನ್ನು ಬರೆಯುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷಾ ಅಕ್ರಮಗಳು ನಡೆಯದಂತೆ ಮನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ವೆಬ್ ಸ್ಟ್ರೀಮಿಂಗ್ ಕೇಂದ್ರಗಳಿಂದ ಸಿಇಓ ಭುವನೇಶ ಪಾಟೀಲ ಅವರು ಪರೀಕ್ಷಾ ಕೇಂದ್ರಗಳಿಗೆ ದೂರವಾಣಿ ಕರೆ ಮಾಡಿ, ಪರೀಕ್ಷೆ ಆಯೋಜನೆ ಬಗ್ಗೆ ಹಾಗೂ ವಿದ್ಯಾರ್ಥಿಗಳ ಪ್ರತಿಕ್ರಿಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ ಇದ್ದರು. ಪರೀಕ್ಷಾ ಕೇಂದ್ರಗಳ ಭೇಟಿ: ಸಿಇಓ ಭುವನೇಶ ಪಾಟೀಲ ಅವರು ಇಂದು ಬೆಳಿಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಕರ್ನಾಟಕ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಳಮಡ್ಡಿಯ ಕೆ.ಇ.ಬೋರ್ಡ ಕಾಲೇಜುಗಳ ಪರೀಕ್ಷಾ ಕೇಂದ್ರಗಳಿಗೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು.
ಕಾಲೇಜುಗಳಲ್ಲಿ ಸ್ಥಾಪಿಸಿರುವ ಸಿಸಿ ಟಿವಿ ನಿರ್ವಹಣಾ ಕೊಠಡಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಪರೀಕ್ಷಾ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳು ಶಿಸ್ತಿನಿಂದ ಹಾಗೂ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುತ್ತಿರುವದನ್ನು ಗಮನಿಸಿದರು. ಸ್ಥಳದಲ್ಲಿದ್ದ ಜಾಗೃತ ದಳದ ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಪ್ರಶ್ನೆ ಪತ್ರಿಕೆ ಗೌಪ್ಯತೆಯನ್ನು ಕಾಪಾಡುವಂತೆ ಹಾಗೂ ನಕಲು ನಡೆಯದಂತೆ ಮುನ್ನಚ್ಚರಿಕೆ ವಹಿಸಲು ಹಾಗೂ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದರು.
ಪರೀಕ್ಷಾ ಹಾಜರಾತಿ: ಇಂದು ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಒಟ್ಟು 25,215 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 24,784 ವಿದ್ಯಾಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 431 ವಿದ್ಯಾಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 98.29 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 