ಜೊಯಿಡಾ ತಾಲೂಕು ರಾಮನಗರ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತರ ಬಲೆಗೆ
Zoida taluk Ramanagar village accountant in the trap of Lokayukta
ಲೋಕದರ್ಶನ ವರದಿ
ದಾಂಡೇಲಿ - ಮಾ. 13 : ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಆಡಳಿತಾಧಿಕಾರಿ ಸಂತೋಷ ಮ್ಯಾಗೇರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ಜರುಗಿದೆ. ಗ್ರಾಮ ಆಡಳಿತಾಧಿಕಾರಿ ಸಂತೋಷ ಮ್ಯಾಗೇರಿ ದಾಖಲಾತಿ ಬದಲಾವಣೆ ಮಾಡುವದಕ್ಕಾಗಿ ಸಂದೇಶ ಶರದ್ ಗುರ್ಜರ್ ಅವರಿಂದ 18 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆೆನ್ನಲಾಗಿದೆ. ಬಳಿಕ ನಡೆದ ಮಾತುಕತೆಯ ನಂತರ 13 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಸಿ.ಪಿ.ಐ ವಿನಾಯಕ ಬಿಲ್ಲವ ಅವರ ನೇತ್ರತ್ವ ತಂಡ ಈ ಕಾರ್ಯಾಚರಣೆ ನಡೆಸಿದ್ದಾರೆ. ಗ್ರಾಮ ಆಡಳಿತಾಧಿಕಾರಿ ಸಂತೋಷ ಮ್ಯಾಗೇರಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ನಡೆಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 