ಪಿಯುಸಿ ಉಪನ್ಯಾಸಕರಿಂದ ಮೌಲ್ಯಮಾಪನ ಬಹಿಷ್ಕಾರ
ಬೆಂಗಳೂರು 12: ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಈ ಬಾರಿಯೂ ಮತ್ತೆ ವಿಘ್ನ ಎದುರಾಗಲಿದೆ. ಮಾ.23ರಿಂದ ಆರಂಭಗೊಳ್ಳಲಿರುವ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸಲು ಪದವಿಪೂರ್ವ ಉಪನ್ಯಾಸಕರು ನಿರ್ಧರಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನರ್ಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರು ಸಾಮೂಹಿಕವಾಗಿ ಮೌಲ್ಯಮಾಪನ ಬಹಿಷ್ಕರಿಸಿ ಮಾ.21ರಿಂದ ನಗರದ ಸ್ವತಂತ್ರ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀಮರ್ಾನಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ನಡೆದ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
1971ರ ಮಾದರಿಯಲ್ಲಿ ಉಪನ್ಯಾಸಕರಿಗೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ರಜೆ ನೀಡಬೇಕು. ಪಿಯುಸಿ ಕಾಲೇಜುಗಳನ್ನು ಮೇ 2ರ ಬದಲಿಗೆ ಮೇ 28ರಂದು ಪ್ರಾರಂಭಿಸಬೇಕು. ಪ್ರತಿ ವರ್ಷ ಉಪನ್ಯಾಸಕರಿಗೆ 30 ಗಳಿಕೆ ರಜೆ, 20 ಅರ್ಧ ವೇತನ ರಜೆ ಹಾಗೂ ತಿಂಗಳ ಎರಡನೇ ಶನಿವಾರಗಳಂದು ರಜೆ ನೀಡಬೇಕು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಡ್ಡಾಯಗೊಳಿಸದೆ, ಐಚ್ಛಿಕವಾಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.
ಸಂಘದ ಯಾವುದೇ ಬೇಡಿಕೆಗಳಿಗೆ ಸಕರ್ಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ನಾವು ಅನಿವಾರ್ಯವಾಗಿ ಮೌಲ್ಯಮಾಪನ ಬಹಿಷ್ಕರಿಸುತ್ತಿದ್ದೇವೆ. ಅದರಿಂದ ಉಂಟಾಗುವ ತೊಂದರೆಗಳಿಗೆ ಶಿಕ್ಷಣ ಇಲಾಖೆಯೇ ಹೊಣೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುಲರ್ೆ ಯುಎನ್ಐ ಕನ್ನಡ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆದರೆ, ಮೌಲ್ಯಮಾಪನಕ್ಕೆ ಗೈರುಹಾಜರಾಗುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಇಲಾಖೆಯ ನಿದರ್ೆಶಕ ಪಿ.ಸಿ.ಜಾಫರ್, ಶಿಕ್ಷಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿ ವರ್ಷ ಮೌಲ್ಯಮಾಪನದ ಸಂದರ್ಭದಲ್ಲಿ ಹೋರಾಟಕ್ಕಿಳಿಯುವುದು ಸರಿಯಲ್ಲ. ವಿದ್ಯಾಥರ್ಿಗಳ ಜೀವನದೊಂದಿಗೆ ಚೆಲ್ಲಾಟವಾಡಬಾರದು. ಮೇ 2ರಂದು ಪದವಿ ಪೂರ್ವ ಕಾಲೇಜು ಆರಂಭಿಸಬೇಕು ಎಂಬುದು ಸಕರ್ಾರದ ನಿಧರ್ಾರ. ಇದು ವಿದ್ಯಾಥರ್ಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿರುವ ತೀಮರ್ಾನ ಎಂದಿದ್ದಾರೆ.
ಸಂಘದ ಹೋರಾಟಕ್ಕೆ ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ಬೋಜೇಗೌಡ ಬೆಂಬಲ ಸೂಚಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 