ಧಾರವಾಡ೦5: ಬರುವ ಏಪ್ರಿಲ್ 23 ರಂದು ನಡೆಯುವ ಲೋಕಸಭಾ ಚುನಾವಣೆಗೆ ಭಾರತ ಚುನಾವಣಾ ಆಯೋಗ ಕಾಲಕಾಲಕ್ಕೆ ನೀಡುವ ಎಲ್ಲ ನಿದರ್ೆಶನಗಳು, ಸೂಚನೆಗಳನ್ನು ಯಾವುದೇ ವ್ಯತ್ಯಯವಾಗದಂತೆ ಪಾಲಿಸಿ ಅಚ್ಚುಕಟ್ಟಾಗಿ ಚುನಾವಣೆ ನಡೆಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಸಮೀರ್ಕುಮಾರ್ ಬಿಸ್ವಾಸ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಚುನಾವಣೆ ಸಿದ್ಧತೆಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ನಾಳೆಯಿಂದ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಲಾಗುವುದು. ಫ್ಲೈಯಿಂಗ್ ಸ್ಕ್ವಾಡ್, ಎಸ್ಎಸ್ಟಿ, ವಿವಿಟಿ, ಚೆಕ್ಪೋಸ್ಟ್ಗಳ ಕಾರ್ಯವೈಖರಿ ಗಮನಿಸಲಾಗುವುದು. ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಒದಗಿಸಿರುವ ಸೌಲಭ್ಯಗಳನ್ನು ಪರಿಶೀಲಿಸಲಾಗುವುದು. ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳ ವಿಶ್ಲೇಷಣೆ ಮಾಡಿ ಮತದಾನ ಕಡಿಮೆಯಾಗಿರುವುದಕ್ಕೆ ಕಾರಣಗಳನ್ನು ಗುರುತಿಸಿ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.
ಜಿಲ್ಲಾಧಿಕಾರಿ, ಚುನಾವಣಾಧಿಕಾರಿ ದೀಪಾ ಚೋಳನ್ ಮಾತನಾಡಿ, ಕ್ಷೇತ್ರದಲ್ಲಿ 16,88,067 ಮತದಾರರಿದ್ದಾರೆ. ಜನಸಂಖ್ಯೆ ಮತ್ತು ಮತದಾರರ ಅನುಪಾತ ಶೇ.70 ರಷ್ಟಿದೆ. ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭ್ಯಥರ್ಿಗಳ ವೆಚ್ಚಗಳ ಮೇಲೆ ನಿಗಾ ಇಟ್ಟು ಅದನ್ನು ನಿರ್ವಹಿಸಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಶಿಗ್ಗಾಂವ ವಿಧಾನ ಸಭಾ ಕ್ಷೇತ್ರ ಸೇರಿ ಒಟ್ಟು 1872 ಮತಗಟ್ಟೆಗಳು ಇವೆ. ಈಗಾಗಲೇ ಮತಗಟ್ಟೆ ಅಧಿಕಾರಿಗಳಿಗೆ ಮಸ್ಟರಿಂಗ್, ಡಿಮಸ್ಟರಿಂಗ್, ಇವಿಎಂ, ವಿವಿಪ್ಯಾಟ್ಗಳ ಬಳಕೆ, ಶಾಸನಬದ್ಧ ವಿವಿಧ ದಾಖಲೆಗಳನ್ನು ನಿರ್ವಹಿಸುವ ತರಬೇತಿ ನೀಡಲಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ರೌಡಿಶೀಟರ್ಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಲಾಗಿದೆ. ಸುಗಮ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಕ್ರಮವಾಗಿ ಹಣ ಹಂಚುವ ಚಟುವಟಿಕೆಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣ ಜಿಲ್ಲಾಡಳಿತ ಅಥವಾ ಪೊಲೀಸ್ರಿಗೆ ಮಾಹಿತಿ ನೀಡಲು ಜಾಗೃತರಾಗಿದ್ದಾರೆ ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸಿ. ಸತೀಶ್ ಮಾತನಾಡಿ, ಜಿಲ್ಲೆಯ 1634 ಮತಗಟ್ಟೆಗಳು 789 ಸ್ಥಳಗಳಲ್ಲಿ ಇರುತ್ತವೆ. ಅವುಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ಮತದಾರರ ಜಾಗೃತಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತಕುಮಾರ್ ಮಿಶ್ರಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್ ಸೇರಿದಂತೆ ಎಲ್ಲ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಮತದಾರರ ನೊಂದಣಿ ಅಧಿಕಾರಿಗಳು, ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.