ಧಾರವಾಡ 16: ಜಿಲ್ಲೆಯಲ್ಲಿ ತಹಶೀಲ್ದಾರರು ಸೇರಿದಂತೆ ಎಲ್ಲ ಅಧಿಕಾರಿಗಳು ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಯಾವುದೇ ಗ್ರಾಮ ಅಥವಾ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತಕ್ಷಣ ಸ್ಪಂದಿಸಿ, 24 ಗಂಟೆಯಲ್ಲಿ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಜರುಗಿಸಿ, ಬರ ನಿರ್ವಹಣೆ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ಮಾತನಾಡಿದರು.
ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ನೀರಿನ ಮೂಲಗಳ ಕೊರತೆಯಿದ್ದಲ್ಲಿ ಖಾಸಗಿ ಬೋರ್ವೆಲ್ ನೀರು ಪಡೆಯುವ ಮೂಲಕ ಸಮಸ್ಯೆ ಪರಿಹರಿಸಿ, ಗ್ರಾಮಮಟ್ಟದ ಅಧಿಕಾರಿಗಳು ನೀಡುವ ವರದಿಯನ್ನು ಇಓ ಮತ್ತು ತಹಶೀಲ್ದಾರರು ಪರಿಶೀಲಿಸಿ, ಕಾಲಕಾಲಕ್ಕೆ ಸ್ಥಳ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ಮಾಡಬೇಕು. ಪ್ರತಿಯೊಂದರಲ್ಲೂ ಪಾರದರ್ಶಕತೆ ಇರಲಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಅಗತ್ಯವಿರುವ ಜನರಿಗೆ ಸ್ಥಾನಿಕವಾಗಿ ಉದ್ಯೋಗ ನೀಡಿ, ಯಾವುದೇ ಕುಟುಂಬ ಉದ್ಯೋಗ ಅರಸಿ ಬೇರೆ ಕಡೆ ಹೋಗದಂತೆ ಮುನ್ನೇಚ್ಚರಿಕೆ ವಹಿಸಿ ಎಂದು ಅವರು ಹೇಳಿದರು.
ಗೋಶಾಲೆಗಳ ಮೂಲಕ ಮತ್ತು ಅಗತ್ಯವಿರುವ ಕಡೆ ದನಕರುಗಳಿಗೆ ಮೇವು ನೀಡಿ, ಮೇವು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದು, ಅಗತ್ಯವಿರುವ ಭಾಗದಲ್ಲಿ ಸರಬರಾಜು ಮಾಡಿ ಮತ್ತು ಸರಿಯಾದ ನಿರ್ವಹಣೆ ಮಾಡಬೇಕೆಂದು ಅವರು ತಿಳಿಸಿದರು.
ಕುಡಿಯುವ ನೀರು, ಉದ್ಯೋಗ ಹಾಗೂ ದನಕರುಗಳಿಗೆ ಮೇವು ಸೇರಿದಂತೆ ಬರ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆ, ಅಹವಾಲುಗಳಿದ್ದಲ್ಲಿ ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಚಿತ ಸಹಾಯವಾಣಿ ಸಂಖ್ಯೆ:1077 ಗೆ ಕರೆ ಮಾಡಿ ಸಾರ್ವಜನಿಕರು ತಿಳಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಬರ ನಿರ್ವಹಣೆ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಸಂಯೋಜನೆ ಮಾಡಲು (ಕೋಆರ್ಡಿನೆಟ್) ಮಾಡುವ ಉದ್ದೇಶದಿಂದ ನೋಡೆಲ್ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ್, ಅಪರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ, ಕೃಷಿ ಇಲಾಖೆಯ ಜಂಟಿ ನಿದರ್ೆಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಉಪನಿದರ್ೆಶಕ ಡಾ. ರಾಮಚಂದ್ರ ಕೆ. ಮಡಿವಾಳ, ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ವಿನಾಯಕ ಪಾಲನಕರ, ತಹಶೀಲ್ದಾರ ಪ್ರಕಾಶ ಕುದರಿ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಲೂಕು ಪಂಚಾಯತ್ ಇಓಗಳು ಕುಡಿಯುವ ನೀರು ಸರಬರಾಜು ಇಲಾಖೆ, ಪಂಚಾಯತ್ರಾಜ್ ಇಂಜಿನೀಯರಿಂಗ್ ವಿಭಾಗ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.