ಧಾರವಾಡ05: ನಗರದ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಅವರ 112 ನೇಯ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಮಾಡಲಾಯಿತು.
ಮಹಾನಗರ ಪೋಲಿಸ್ ಆಯುಕ್ತ ಎಂ. ಎನ್. ನಾಗರಾಜ, ಜಿ.ಪಂ. ಸಿ.ಇ.ಓ ಡಾ.ಬಿ.ಸಿ.ಸತೀಶ ಅಪರ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದರ್ೆಶಕ ಮುನಿರಾಜು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.