ಶಾಲಾ ಮಕ್ಕಳಿಂದ ಪಾಲಕರಿಗೆ ಮನವಿ ಪತ್ರ
ಹಾವೇರಿ:13: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಹೆಚ್ಚಳಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿಯ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಸತಿ ಶಾಲಾ ಮಕ್ಕಳು, ವಿದ್ಯಾಥರ್ಿ ನಿಲಯದ ಮಕ್ಕಳಿಂದ ಪಾಲಕರಿಗೆ ಅಂಚೆ ಪತ್ರದ ಮೂಲಕ ಮತದಾನ ಮಾಡಲು ಪಾಲಕರಿಗೆ ಮನವಿ ಮಾಡಿಕೊಳ್ಳುವ ವಿಶಿಷ್ಟ ಕಾರ್ಯಕ್ರಮ ನಡೆಸಲಾಗುತ್ತಿದೆ.
ಕರ್ಜಗಿ ಅಲ್ಪಸಂಖ್ಯಾತರ ಮೊರಾಜರ್ಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇತ್ತೀಚೆಗೆ ಸಾಮೂಹಿಕವಾಗಿ ತಮ್ಮ ತಮ್ಮ ಪಾಲಕರಿಗೆ ಅಂಚೆ ಪತ್ರ ಬರೆದು ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಭಾಗವಹಿಸಿ ಮತದಾನ ಮಾಡಲು ಮನವಿ ಮಾಡಿಕೊಂಡಿದ್ದಾರೆ.
ಪತ್ರದಲ್ಲಿ ದೇಶದ ಅಭಿವೃದ್ಧಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ತಪ್ಪದೇ ಮತದಾನಮಾಡಿ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಿ. ಒಂದೊಮ್ಮೆ ತಮ್ಮ ಹೆಸರು ಕೈಬಿಟ್ಟು ಹೋಗಿದ್ದರೆ ಈಗಲೇ ನೋಂದಾಯಿಸಿಕೊಳ್ಳಿ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಲೋಕಸಭಾ ಚುನಾವಣೆಯ ಮತದಾನದ ದಿನದಂದು ಉದಾಸೀನ ತೋರದೆ ಮತದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವ ಯಶಸ್ವಿಗೊಳ್ಳಬೇಕಾದಲ್ಲಿ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ತಮ್ಮ ತಮ್ಮ ಊರಿಗೆ ಹೋದಾಗ ಪಾಲಕರು, ನೆರೆಹೊರೆಯವರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ವಿದ್ಯಾಥರ್ಿಗಳಿಗೆ ಕರೆ ನೀಡಿದರು.
ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ 350 ಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕಡೆಮನಿ, ಪ್ರಾಚಾರ್ಯ ಶಿಡೇನೂರಸ್ವಾಮಿ ಕೆ. ಹಾಗೂ ವಸತಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 