ಎಂಸಿಎಂಸಿ ಸಮಿತಿ ಸದಸ್ಯರು, ಸಿಬ್ಬಂದಿಗೆ ಕಾರ್ಯಾಗಾರ

ಧಾರವಾಡ.28: ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣೆ ಆಯೋಗ ಈಗಾಗಲೇ ಸಕಲ ಕ್ರಮಗಳನ್ನು ಕೈಗೊಂಡಿದ್ದು, ಅದರ ಸೂಚನೆ ಅನ್ವಯ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಮತ್ತು  ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾತರ್ಾಭವನದಲ್ಲಿ ಮಾಧ್ಯಮ ಕಣ್ಗಾವಲು ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿ ರಚಿಸಲಾಗಿದ್ದು, ಅದರ ಮೂಲಕ ಎಲ್ಲ ಮಾಧ್ಯಮಗಳ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಪೇಡ್ ನ್ಯೂಸ್ಗಳ ಮೇಲೆ ಕಣ್ಣೀಡಲಾಗಿದೆ ಎಂದು ಎಂಸಿಎಂಸಿ ನೋಡಲ್ ಅಧಿಕಾರಿ, ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಮಂಜುನಾಥ ಡಿ.ಡೊಳ್ಳಿನ ಹೇಳಿದರು.

     ನಗರದ ವಾತರ್ಾಭವನದಲ್ಲಿ ಎಂಸಿಎಂಸಿ ಸಮಿತಿ ಸದಸ್ಯರಿಗೆ ಹಾಗೂ ಮಾಧ್ಯಮ ಕಣ್ಗಾವಲು ಸಿಬ್ಬಂದಿಗೆ ಗುರುವಾರ ಆಯೋಜಿಸಿದ್ದ ಎಂಸಿಎಂಸಿ ಸಮಿತಿ ಕಾರ್ಯವೈಖರಿ ಕುರಿತು ಕಾಯರ್ಾಗಾರದಲ್ಲಿ ಅವರು ಮಾತನಾಡಿದರು.

 "ಪೇಡ್ ನ್ಯೂಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯಥರ್ಿಗಳಿಗೆ ಮಾಧ್ಯಮ ಸಂಬಂಧಿತ ಅಜರ್ಿಗಳು ಹಾಗೂ ಅನುಮತಿಗಳನ್ನು ಸರಾಗವಾಗಿ ನೀಡುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದ್ದು, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಕೇಬಲ್ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

      ಎಂ.ಸಿ.ಎಂ.ಸಿ. ಸಮಿತಿಗೆ ನೆರವಾಗಲು ದಿನಪತ್ರಿಕೆಗಳನ್ನು ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳನ್ನು ವೀಕ್ಷಿಸಲು, ಮಾಧ್ಯಮ ಪ್ರಮಾಣೀಕರಣಕ್ಕೆ ಒಟ್ಟು 20 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 

 ಜಿಲ್ಲೆಗೆ ಸಂಬಂಧಿಸಿದಂತೆ ವಿದ್ಯುನ್ಮಾನ ವಾಹಿನಿಗಳು, ಮುದ್ರಣ ಮಾಧ್ಯಮ ಹಾಗೂ ಕೇಬಲ್ ವಾಹಿನಿಗಳಲ್ಲಿ ಪ್ರಸಾರವಾಗುವ ಪ್ರತಿ ಕಾರ್ಯಕ್ರಮವನ್ನು ಪರಿಶೀಲಿಸಲಾಗುತ್ತದೆ. ಉಲ್ಲಂಘನೆ ಹಾಗೂ ಸಂಶಯಾಸ್ಪದ ಕಾಸಿಗಾಗಿ ಸುದ್ದಿಗಳು ಪ್ರಸಾರವಾದಲ್ಲಿ ಅವುಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

   ಮತದಾನಕ್ಕೆ ಇನ್ನೂ ನಾಲ್ಕು ದಿನಗಳಿದೆ ಎಂದ ಸಂದರ್ಭದಲ್ಲಿ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟ ಮಾಡುವುದಕ್ಕೆ ಸಂಬಂಧಿಸಿದಂತೆ ಅನುಮತಿ ಅಗತ್ಯ. ವಿದ್ಯುನ್ಮಾನ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಸಾರ ಮಾಡುವುದಕ್ಕೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಲೇಬೇಕು.

  ಒಂದು ವೇಳೆ ನಿರ್ಲಕ್ಷಿಸಿ ಪ್ರಸಾರ ಮಾಡಿದರೇ ವಾಹಿನಿಗಳು ಹಾಗೂ ಸಂಬಂಧಿಸಿದ ಅಭ್ಯಥರ್ಿಗಳ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಲಿದ್ದಾರೆ ಎಂದರು.

    ಸ್ಥಳೀಯ ಕೇಬಲ್ ವಾಹಿನಿಗಳು ಚುನಾವಣಾ ಜಾಹೀರಾತು ಪ್ರಸಾರಕ್ಕೂ ಮುನ್ನ ರಾಜಕೀಯ ಪಕ್ಷಗಳು, ಅಭ್ಯಥರ್ಿಗಳು ಎಂ.ಸಿ.ಎಂ.ಸಿ. ಸಮಿತಿಯಿಂದ ಪೂವರ್ಾನುಮತಿ ಪಡೆದುಕೊಂಡಿವೆ ಎಂಬುದನ್ನು ಖಾತ್ರಿಪಡಿಸಕೊಂಡು ಜಾಹೀರಾತು ಪ್ರಸಾರ ಮಾಡಬೇಕು. 

  ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ದಲ್ಲಿ ಕೇಬಲ್ ವಾಹಿನಿಗಳ ಉಪಕರಣಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಜಪ್ತಿ ಮಾಡಿ ಕೇಸ್ ದಾಖಲಿಸಲಿದ್ದಾರೆ ಎಂದರು.

    ಪತ್ರಿಕೆಗಳಲ್ಲಿ ಪ್ರಕಟವಾಗುವ ಚುನಾವಣೆಗೆ ಸಂಬಂಧಿಸಿದ ಜಾಹೀರಾತುಗಳನ್ನು ಗಮನಿಸಿ ಆ ಜಾಹೀರಾತಿಗೆ ತಗಲುವ ವೆಚ್ಚವನ್ನು ಜಾಹೀರಾತು ನೀಡಿದ ಪಕ್ಷ, ಅಭ್ಯಥರ್ಿಯ ವೆಚ್ಚದ ಖಾತೆಗೆ ಜಮಾ ಮಾಡಿ ಚುನಾವಣೆಯ ಖಚರ್ು-ವೆಚ್ಚ ಶಾಖೆಗೆ ಮಾಹಿತಿ ನೀಡಲಾಗುತ್ತದೆ. ಎಲ್ಲಾ ಪತ್ರಿಕೆಗಳ ವಾಣಿಜ್ಯ ಜಾಹೀರಾತು ದರ ಪಟ್ಟಿ ವಾತರ್ಾ ಇಲಾಖೆ ಬಳಿಯಿದ್ದು, ಅದರನ್ವಯ ಜಾಹೀರಾತು ದರವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

        ಎಂಸಿಎಂಸಿ ಸಮಿತಿ ಸದಸ್ಯರಾದ ಆಕಾಶವಾಣಿ ಸುದ್ದಿ ವಿಭಾಗದ ಸಹಾಯಕ ನಿದರ್ೇಶಕಿ ಕೆ.ವೈ. ಜಯಂತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿದರ್ೇಶಕ ಮಲ್ಲಿಕಾಜರ್ುನ ಭಜಂತ್ರಿ, ಕವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಸಂಜಯಕುಮಾರ್ ಮಾಲಗತ್ತಿ, ವಸಂತ ಮುಡರ್ೇಶ್ವರ, ವಾತರ್ಾ ಸಹಾಯಕ ಸುರೇಶ ಹಿರೇಮಠ ಅವರು ಮಾತನಾಡಿ ಚುನಾವಣಾ ಸಂದರ್ಭದಲ್ಲಿ  ಸಮಿತಿ ಸಿಬ್ಬಂದಿ ವಹಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

         ಶಿಕ್ಷಕರಾದ ಎಫ್.ಬಿ. ಕಣವಿ, ರಾಮು ಮೂಲಗಿ ಚುನಾವಣಾ ಗೀತೆಗಳನ್ನು ಪ್ರಸ್ತುತ ಪಡಿಸಿದರು. ವಾತರ್ಾ ಇಲಾಖೆಯ ಪ್ರ.ದ.ಸ ಸಿ.ಬಿ. ಭೋವಿ ಸೇರಿದಂತೆ ಎಂ.ಸಿ.ಎಂ.ಸಿ ತಂಡದ ಸದಸ್ಯರು ಇದ್ದರು.