ಅಮರಾಪುರ ಗ್ರಾಮದಲ್ಲಿ ‘ಗ್ಯಾರಂಟಿ ನಡೆ- ಗ್ರಾಪಂ ಕಡೆ’ ಶೋಷಿತರ ಪರವಾದ ಗ್ಯಾರಂಟಿ ಯೋಜನೆಗಳು: ಕೆ.ಇ.ಚಿದಾನಂದಪ್ಪ
‘Guarantee step- Gramam Kade’ in Amarapura village Guarantee schemes for the exploited: K.E. Chidan
ಬಳ್ಳಾರಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿನ, ಬಡವರ, ಶೋಷಿತರ ಪರವಾಗಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಬಳ್ಳಾರಿ ತಾಲ್ಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಅಮರಾಪುರ ಗ್ರಾಪಂ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಗ್ಯಾರಂಟಿ ನಡೆ ಗ್ರಾಮ ಪಂಚಾಯತ್ ಕಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿಗಳಿಂದ ಜನರ ಜೀವನಮಟ್ಟ ಬಹಳಷ್ಟು ಸುಧಾರಣೆಯಾಗಿದೆ. ಗ್ರಾಮದಲ್ಲಿ ಇರುವ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಯ ಉಪಯೋಗಗಳನ್ನು ಸಮರ್ಕವಾಗಿ ಪಡೆದುಕೊಳ್ಳಬೇಕು. ಯಾರು ವಂಚಿತರಾಗಬಾರದು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ವಿಳಂಬ, ತೊಂದರೆಯಾಗಿದ್ದಲ್ಲಿ, ಮನೆ ಬಾಗಿಲಿಗೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕಾರ್ಯಕ್ರಮ ‘ಗ್ಯಾರಂಟಿ ನಡೆ-ಗ್ರಾಮ ಪಂಚಾಯತ್ ಕಡೆ’ ಇದಾಗಿದೆ ಎಂದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳನ್ನು ಸೂಕ್ತವಾಗಿ ಜನರಿಗೆ ತಲುಪಿಸಲಾಗುತ್ತಿದೆ. ಪಂಚ ಗ್ಯಾರಂಟಿಗಳಿಂದ ಜನರ ಜೀವನಮಟ್ಟ ಸುಧಾರಣೆ ಹಾಗೂ ಮಹಿಳಾ ಸಬಲೀಕರಣಕ್ಕೆ ದಾರಿಯಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳು ನಿಷ್ಕಾಳಜಿ ತೋರಿಸದೇ, ಸಾಮಾನ್ಯ ಜನರಿಗೆ ಯಾವುದೇ ತೊಂದರೆಯಾಗದಂತೆ ತಲುಪಿಸಬೇಕು ಎಂದರು.
ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗೋನಾಳ್ ನಾಗಭೂಷಣ ಗೌಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವ ಮೊದಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ನುಡಿದಂತೆ ನಡೆದ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಾಗಿದೆ ಎಂದು ನುಡಿದರು.
ಬಳ್ಳಾರಿ ತಾಲ್ಲೂಕಿನ 61 ಗ್ರಾಮ, 3 ಕ್ಯಾಂಪ್ ಮತ್ತು ಬಳ್ಳಾರಿ ನಗರದ 11 ವಾರ್ಡ್ ಒಳಗೊಂಡಂತೆ ಕೆಳ, ಮಧ್ಯಮ, ಮೇಲ್ವರ್ಗ ಸೇರಿದಂತೆ ಯಾವುದೇ ಮತೀಯ ಭೇದವಿಲ್ಲದೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ತಲುಪಿಸಲಾಗಿದೆ ಎಂದು ತಿಳಿಸಿದರು.
ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಐ ಬಾರಿಕಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರವು ಮಹಿಳೆಯರನ್ನು ಸಶಕ್ತರನ್ನಾಗಿಸಲು ಅವರನ್ನು ಕೇಂದ್ರೀಕರಿಸಿ, ಅವರಿಗಾಗಿಯೇ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ದೇಶದಲ್ಲಿಯೇ ಕರ್ನಾಟಕ ರಾಜ್ಯವೇ ಮೊದಲು. ಅದರಲ್ಲಿ ಮಹಿಳೆಯರನ್ನು ಸ್ವಾವಲಂಬಿಗಳಾಗಿಸಲು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈವರೆಗೆ ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ಯೋಜನೆಗಳ ಲಾಭ ಪಡೆಯದಿರುವರು ಇದ್ದಲ್ಲಿ ಗಮನಕ್ಕೆ ತಂದರೆ ಇತ್ಯರ್ಥ ಪಡಿಸಿ ಸೌಲಭ್ಯ ತಲುಪಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಾಯಿತು. ಬಳಿಕ ಮಹಿಳೆಯರೊಂದಿಗೆ ಸಂವಾದ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಮರಾಪುರ ಗ್ರಾಪಂ ಅಧ್ಯಕ್ಷೆ ಭಾರತಿ ಗುರುಸ್ವಾಮಿ, ಉಪಾಧ್ಯಕ್ಷ ಜಿ.ಗಾದಿಲಿಂಗಪ್ಪ, ಅಮರಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಸೇರಿದಂತೆ ಗ್ರಾಪಂ ಸದಸ್ಯರು, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು, ಪಕ್ಷದ ಮುಖಂಡರು, ಗ್ರಾಮದ ಮುಖಂಡರು, ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 