‘ಸಂಕ್ರಾಂತಿ ಬಳಿಕ ಸಿಎಂ ಬದಲಾವಣೆ ನನಗೆ ಗೊತ್ತಿಲ್ಲ’
‘I don’t know about the change of CM after Sankranti’
ಧಾರವಾಡ: ಸಂಕ್ರಾಂತಿ ಬಳಿಕ ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ನಾನೊಬ್ಬ ಪಕ್ಷದ ಶಿಸ್ತಿನ ಸಿಪಾಯಿ. ಸಿಎಂ ಬದಲಾವಣೆ ವಿಚಾರವನ್ನು ನಾನೂ ಪತ್ರಿಕೆ ಹಾಗೂ ಟಿವಿಯಲ್ಲಿ ಮಾತ್ರ ನೋಡಿದ್ದೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರವಾಗಿ ಅವರು ಅವರವರ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆ ಬಗ್ಗೆ ಶಾಸಕಾಂಗ ಪಕ್ಷದಲ್ಲಿ ತೀರ್ಮಾನ ಆಗುತ್ತದೆ. ಹೈಕಮಾಂಡ್ ಹೇಳಿದ ಮೇಲೆ ನಾವೆಲ್ಲ ಒಪ್ಪಿಕೊಳ್ಳುವುದಿದೆ. ಕರ್ನಾಟಕದವರೇ ಆಗಿರುವ ಖರ್ಗೆ ಸಾಹೇಬರಿಗೆ ಎಲ್ಲವೂ ಗೊತ್ತಿದೆ.
ಎಲ್ಲವನ್ನೂ ಅವರು ನಿಭಾಯಿಸುತ್ತಾರೆ. ಹೈಕಮಾಂಡ್ ಸಿಎಂ ಬದಲಾವಣೆ ಬಗ್ಗೆ ನನ್ನನ್ನು ಕೇಳಿದರೆ ಮಾತ್ರ ಅವರಿಗೆ ರಿಯಾಕ್ಟ್ ಮಾಡುತ್ತೇನೆ ಎಂದರು. ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಮರಳಿ ವಸತಿ ಕಲ್ಪಿಸುವ ವಿಚಾರ ನನಗೆ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 