ಸೆ.17 ರಿಂದ ‘ಸ್ವಸ್ತನಾರಿ ಶಕ್ತಿ ಪರಿವಾರ ಅಭಿಯಾನ’
‘Swastanari Shakti Parivara Abhiyana’ from September 17
ಸೆ.17 ರಿಂದ ‘ಸ್ವಸ್ತನಾರಿ ಶಕ್ತಿ ಪರಿವಾರ ಅಭಿಯಾನ’
ಹಾವೇರಿ 16: ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ‘ಸ್ವಸ್ತ ನಾರಿ ಶಕ್ತಿ ಪರಿವಾರ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಪ್ರದೀಪಕುಮಾರ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸ್ವಸ್ತ ನಾರಿ ಶಕ್ತಿ ಪರಿವಾರ ಅಭಿಯಾನದಲ್ಲಿ ಮಹಿಳೆಯರು, ಹದಿಹರೆಯದವರು ಮತ್ತು ಮಕ್ಕಳ ಹಲವು ಆರೋಗ್ಯ ಚಟುವಟಿಕೆಗಳನ್ನು ಆಯ್ಕೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ಮಾರ್ಗದರ್ಶನದೊಂದಿಗೆ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಿಬ್ಬಂದಿ ಸಮನ್ವಯ ಸಾಧಿಸಿಕೊಂಡು ಅವರುಗಳಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.
ಜಿಲ್ಲೆಯ ಐದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶಿಬಿರಗಳನ್ನು ಏರಿ್ಡಸಲಾಗಿದೆ, ಸೆಪ್ಟೆಂಬರ್ 20 ರಂದು ಸಮುದಾಯ ಆರೋಗ್ಯ ಕೇಂದ್ರ ಬಂಕಾಪುರ, ಸೆಪ್ಟೆಂಬರ್ 22 ರಂದು ಸಮುದಾಯ ಆರೋಗ್ಯ ಕೇಂದ್ರ ಗುತ್ತಲ, ಸೆಪ್ಟೆಂಬರ್ 23 ರಂದು ಸಮುದಾಯ ಆರೋಗ್ಯ ಕೇಂದ್ರ ರಟ್ಟಿಹಳ್ಳಿ, ಸೆಪ್ಟೆಂಬರ್ 25 ರಂದು ಸಮುದಾಯ ಆರೋಗ್ಯ ಕೇಂದ್ರ ಮಾಸೂರು, ಸೆಪ್ಟೆಂಬರ್ 27 ರಂದು ಸಮುದಾಯ ಆರೋಗ್ಯ ಕೇಂದ್ರ ಅಕ್ಕಿ ಆಲೂರನಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಲಾಗುವುದು.
ಶಿಬಿರದಲ್ಲಿ ಮುಖ್ಯವಾಗಿ ರಕ್ತ, ಕ್ಯಾನ್ಸರ್, ಮಾನಸಿಕ ಆರೋಗ್ಯದ ತಪಾಸಣೆ, ರಕ್ತದಾನ, ಟಿಬಿ ತಪಾಸಣೆಗೆ ವಿಶೇಷ ಒತ್ತು ನೀಡಲಾಗುವುದು. ಜಿಲ್ಲೆಯನ್ನು ಟಿಬಿ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶ ಹೊಂದಿದಲಾಗಿದೆ ಎಂದರು.
ಜಿಲ್ಲಾದ್ಯಂತ ಸಾರ್ವಜನಿಕರ ಬದುಕನ್ನು ಸುಗಮಗೊಳಿಸಲು ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿಶೇಷ ಅರೋಗ್ಯ ತಪಾಸಣೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ. ಸಮುದಾಯದ ಅರೋಗ್ಯ ಕೇಂದ್ರ ವ್ಯಾಪ್ತಿಯ ಸಾರ್ವಜನಿಕರು ಇದರ ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಯಾನಂದ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ.ಪಿ.ಆರ್ ಹಾವನೂರ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 