“ಫೋಟೋ ಎಡಿಟಿಂಗ್ ಮತ್ತು ಗ್ರಾಫಿಕ್ ವಿನ್ಯಾಸ”
“Photo Editing and Graphic Design”
ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗವು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಲ್ಲಿ ಇದೇ ದಿ. 03 ಮತ್ತು 04 ರಂದು “ಫೋಟೋ ಎಡಿಟಿಂಗ್ ಮತ್ತು ಗ್ರಾಫಿಕ್ ವಿನ್ಯಾಸ” ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ
ಮಾರ್ಚ್ 3ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಉದ್ಘಾಟಿಸಲಿದ್ದು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಹಣಕಾಸು ಅಧಿಕಾರಿ ರಾಮಣ್ಣ ಅಥಣಿ, ಯುಜಿ ಬ್ಲಾಕ್ ವಿಶೇಷಾಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ ಉಪಸ್ಥಿತರಿರಲಿದ್ದಾರೆ.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಪ್ರಜಾವಾಣಿ ಮುಖ್ಯ ಕಲಾವಿದ ಸಿದ್ದಲಿಂಗಯ್ಯ ಕಣಕಾಲ್ಮಠ ಹಾಗೂ ವಿಜಯ ಕರ್ನಾಟಕ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಧೀರಜ್ ಪೋಯೆಕಂಡ ಹಾಗೂ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹ ವಿಭಾಗದ ಡಾ.ಸಂದೀಪ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ.ಬಿ.ಸೋನಾರ, ಡಾ.ರೋಹಿಣಿ ಬಿ, ಹಾಗೂ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಾಗಾರದ ಸಂಯೋಜಕಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ನಿಗರ್ ಸುಲ್ತಾನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 