ಜ.02 ರಿಂದ 07 ರವರೆಗೆ “ರಂಗಾಯಣ ನಾಟಕೋತ್ಸವ”
“Rangayana Drama Festival” from Jan. 02 to 07
ಧಾರವಾಡ 31 : ರಂಗಾಯಣ ಧಾರವಾಡವು ಜ. 02 ರಿಂದ 07ರ ವರೆಗೆ ಪ್ರತಿದಿನ ಸಂಜೆ 6.00ಕ್ಕೆ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ “ರಂಗಾಯಣ ನಾಟಕೋತ್ಸವ ಹಾಗೂ ಗಾಂಧಿಭಾರತ ಐತಿಹಾಸಿಕ ಭಾವಚಿತ್ರಗಳ ಪ್ರದರ್ಶನ”ವನ್ನು ಹಮ್ಮಿಕೊಂಡಿದೆ.
ಯಕ್ಷ ರಂಗಾಯಣದ ನಿರ್ದೇಶಕರಾದ ವೆಂಕಟರಮಣ ಐತಾಳ ಅವರು ನಾಟಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ರಂಗಸಮಾಜ ಸದಸ್ಯರಾದ ಎಸ್. ಜಹಾಂಗೀರ್, ಬೆಂಗಳೂರು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಡಾ. ನಿಂಗಪ್ಪ ಮುದೇನೂರ, ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ಎಚ್ ಚನ್ನೂರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜ.02 ರಂದು “ಸೋಮಿಯ ಸೌಭಾಗ್ಯ”, ಜ. 03 ರಂದು “ಗುಲಾಮನ ಸ್ವಾತಂತ್ರ್ಯ ಯಾತ್ರೆ”, ಜ. 04 ರಂದು “ಮಹಾತ್ಮರ ಬರವಿಗಾಗಿ” ನಾಟಕಗಳನ್ನು ಕಾರ್ಕಳ ಯಕ್ಷ ರಂಗಾಯಣದ ರೆಪರ್ಟರಿ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ. ಜ. 05 ರಂದು “ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ(ಪೂರ್ವಾರ್ಧ)”, ಜ.06 ರಂದು “ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ(ಉತ್ತರಾರ್ಧ)” ನಾಟಕವನ್ನು ಧಾರವಾಡ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ.
ಜ. 07 ರಂದು ಸಮಾರೋಪ ಸಮಾರಂಭದಲ್ಲಿ ಕ.ವಿ.ವಿ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಕನಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಸಿ. ಹನುಮಗೌಡ ಅವರು ಸಮಾರೋಪ ನುಡಿಗಳನ್ನಾಡುವರು. ಡಿ.ವ್ಹಿ ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾದ ಬಿ. ಮಾರುತಿ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ರಂಗಾಯಣ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ “ಕಾಲಚಕ್ರ” ನಾಟಕವನ್ನು ಕಲಬುರ್ಗಿ ರಂಗಾಯಣ ರೆಪರ್ಟರಿ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ.
ಪ್ರತಿದಿನ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆ ವತಿಯಿಂದ ಗಾಂಧೀಜಿ ಅವರ ಕುರಿತ ಹಾಗೂ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಕುರಿತು ಭಾವಚಿತ್ರಗಳ ಪ್ರದರ್ಶನವಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಬೇಕು ಎಂದು ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 