“ಕನ್ನಡದ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ಕಳವಳದ ಸಂಗತಿ”- ಡಾ.ಸದಾಶಿವ ನಡುವಿನಕೇರಿ
“The declining interest in Kannada is a matter of concern” - Dr. Sadashiva Dharikeri
ಧಾರವಾಡ 09 : ಪಠ್ಯಗಳು ಮುಂದಿನ ಓದಿಗೆ ಅನುಕೂಲವಾದರೆ, ಪಠ್ಯೇತರ ಓದು ಬದುಕಿಗೆ ದಾರಿ ದೀಪವಾಗುತ್ತದೆ. ಇವೆರಡು ಪೂರಕವಾದಾಗಲೇ ಬಾಳು ಬಂಗಾರವಾಗುತ್ತದೆ. ಎಂದು ಜೆ.ಎಸ್.ಎಸ್. ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ.ಸದಾಶಿವ ನಡುವಿನಕೇರಿ ಹೇಳಿದರು. ಅವರು ಇಂದು ಜನತಾ ಶಿಕ್ಷಣ ಸಮಿತಿಯ ಆರ್.ಎಸ್.ಹುಕ್ಕೇರಿಕರ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನ ಕನ್ನಡ ಪ್ರತಿಭಾ ಪರೀಕ್ಷೆಯ ಬಹುಮಾನ ವಿತರಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಂದುವರೆದು ಮಾತನಾಡಿದ ಅವರು “ ಕನ್ನಡದ ಭಾಷೆಯ ಓದು, ಬರಹದ ಆಸಕ್ತಿ ವಿದ್ಯಾರ್ಥಿಗಳಲ್ಲಿ ಕಡಿಮೆಯಾಗುತ್ತಿರುವುದು ತುಂಬಾ ಕಳವಳಕರ. ಮಾತೃಭಾಷೆ ನಮ್ಮ ಅನ್ನದ ಭಾಷೆಯು ಕೂಡಾ ಹೌದು. ಕನ್ನಡದ ಬಗ್ಗೆ ಅಭಿಮಾನ ಹೊಂದಿದಾಗ ಮಾತ್ರ ಭಾಷೆ ಉಳಿಯುವಂತಹದು. ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಭಾಷೆಯನ್ನು ಬಳಸುವಂತಾಗಬೇಕು. ಇದು ಮುಂದಿನ ಪೀಳಿಗೆಗೆ ಸ್ಪೂರ್ತಿ, ಧೈರ್ಯ ತುಂಬುವಂತಹುದಾಗಿದೆ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಭಾರತಿ ಶಾನಭಾಗ ಅವರು ಮಾತನಾಡಿ “ ಕಲಿಕೆಯ ಹಂತದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿದರೆ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ಭಾಷೆ ಕೇವಲ ಪರೀಕ್ಷೆಗೆ ಸೀಮಿತವಾದುದಲ್ಲ, ಉನ್ನತ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಎಸ್.ಕೆ.ಪಾಟೀಲ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆರಂಭದಲ್ಲಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾದ ಸ್ವಾತಿ ಪ್ರಭು ಪ್ರಾರ್ಥಿಸಿದರು. ಡಾ.ಗೋವಿಂದರಾಜ ತಳಕೋಡ ಸ್ವಾಗತಿಸಿದರು. ವೀರೇಂದ್ರಕುಮಾರ ಎಂ.ಎಸ್.ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡಿಸಿಕೊಟ್ಟರೆ, ಡಾ.ಸಂಗಯ್ಯ ಶಿವಪ್ಪಯ್ಯನಮಠ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 