“ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳ ಕನಸು ಸಾಕಾರ” ಹಿ ಶ್ರೀ. ರಾಜಣ್ಣ ಕೊರವಿ
“With continuous effort, students' dreams come true” Hi Mr. Rajanna Koravi
ಧಾರವಾಡ 26 : “ದೇಶದ ಭವಿಷ್ಯವಾಗಿರುವ ಇಂದಿನ ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಂಡು ಸದೃಢ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣದಲ್ಲಿ ಕೈಜೋಡಿಸಬೇಕು” ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀ. ರಾಜಣ್ಣ ಕೊರವಿ ಹೇಳಿದರು.
ಅವರು ಇಂದು ಜನತಾ ಶಿಕ್ಷಣ ಸಮಿತಿಯ ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾಸಂಘಗಳ ಸಮಾರೋಪ ಸಮಾರಂಭ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಂದುವರೆದು ಮಾತನಾಡಿದ ಅವರು “ಯಶಸ್ಸೆಂಬುದು ಯಾರೊಬ್ಬರ ಸ್ವತ್ತಲ್ಲ. ನಿರಂತರ ಸಾಧನೆಯಿಂದ ವಿದ್ಯಾರ್ಥಿಗಳು ಯಶಸ್ಸನ್ನು ಕಂಡುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿ ಸತತ ಪ್ರಯತ್ನದಿಂದ ತನ್ನ ಗುರಿ ಮುಟ್ಟುತ್ತಾನೆ. ಅತಿಯಾದ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಯ ಮನೋಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ ಹಾಗೂ ಪರೀಕ್ಷಾ ಭಯಕ್ಕೆ ತುತ್ತಾಗದೇ, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಒಂದು ಸವಾಲಾಗಿ ತೆಗೆದುಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ಅವರು ಮಾತನಾಡಿ “ಪಿಯುಸಿ ಕಲಿಕೆಯ ಹಂತವು ವಿದ್ಯಾರ್ಥಿ ಬದುಕಿನ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ನಮ್ಮನ್ನು ನಾವು ಗುರುತಿಸಿಕೊಳ್ಳುವುದು ತುಂಬ ಅಗತ್ಯ. ಈ ದಿಸೆಯಲ್ಲಿ ಕಷ್ಟಪಟ್ಟು ಓದದೇ ಇಷ್ಟಪಟ್ಟು ಓದಿದರೆ ಬದುಕು ಬಂಗಾರವಾಗಲಿದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಬಹಳ ಮುಖ್ಯ, ಮೊಬೈಲ್, ಇಂಟರನೆಟ್ ಹಾಗೂ ಇನ್ನಿತರ ವ್ಯಸನಗಳಿಗೆ ಒಳಗಾಗದೇ ಕಲಿಕೆಯಲ್ಲಿ ತಮ್ಮ ಚಿತ್ತವಿರಬೇಕು” ಎಂದು ಹೇಳಿದರು.
ಮುಖ್ಯ ಅತಿಥಿಗಳ ಹಾಗೂ ಅಧ್ಯಕ್ಷರನ್ನು. ಅಕಿಲಾ ಅಣ್ಣಿಗೇರಿ ಪರಿಚಯಿಸಿದರು. ಮಹಾವಿದ್ಯಾಲಯದ ಪ್ರಾಚಾರ್ಯೆ. ಭಾರತಿ ಶಾನಭಾಗ ಅವರು ವಾರ್ಷಿಕ ವರದಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಈ ವರ್ಷದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶಿಕ್ಷಕರನ್ನು ಮತ್ತು ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಳೆದ ವರ್ಷ ಪ್ರಥಮ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ, ಜೆಇಇ ಮತ್ತು ನೀಟ್ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನೂ ಸಹ ಸನ್ಮಾನಿಸಲಾಯಿತು. ಇದನ್ನು ವಿನಯಾ ಜೋಶಿ ಮತ್ತು. ಶ್ವೇತಾ ಕುಲಕರ್ಣಿ ನಿರೂಪಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಜೆ.ಎಸ್.ಎಸ್. ಐ,ಟಿ.ಐ ಕಾಲೇಜಿನ ಪ್ರಾಚಾರ್ಯರಾದ . ಮಹಾವೀರ ಉಪಾಧ್ಯೆ, ಕ್ರೀಡಾ ನಿರ್ದೇಶಕರಾದ ಅರುಣ ಸವಣೂರ, ವಿದ್ಯಾರ್ಥಿ ಪ್ರತಿನಿಧಿ ಕು. ಶಿವನಾಗಯ್ಯ ಹಿರೇಮಠ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಹಾವಿದ್ಯಾಲಯದ ಎಲ್ಲ ಭೋದಕ-ಭೋದಕೇತರ ಸಿಬ್ಬಂದಿ ವರ್ಗ ಹಾಗೂ ಪಾಲಕರು ಉಪಸ್ಥಿತರಿದ್ದರು. ಆರಂಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ ಜರುಗಿತು. ವಿದ್ಯಾರ್ಥಿನಿ ಕು. ಭೂಮಿಕಾ ಮತ್ತು ಅರ್ಿತಾ ಕಾರ್ಯಕ್ರಮ ನಿರೂಪಿಸಿದರು. ಕು. ಪ್ರಜ್ಞಾ ಹೆಗಡೆ ಸ್ವಾಗತಿಸಿದರು. ಕು. ಸಂಧ್ಯಾ ವಂದಿಸಿದರು. ಆನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 