ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 0.20 ಸೆಂಟ್ಸ್‌ ಜಮೀನು ಮಂಜೂರು

ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 0.20 ಸೆಂಟ್ಸ್‌ ಜಮೀನು ಮಂಜೂರು  0.20 cents of land sanctioned for the construction of a Government Employees' Bhavan in Ballari

ಬಳ್ಳಾರಿ, 10: ಬಳ್ಳಾರಿ ನಗರದ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ‘ಜಿಲ್ಲಾ ಸರ್ಕಾರಿ ನೌಕರರ ಭವನ’ ನಿರ್ಮಾಣಕ್ಕೆ ಇದೀಗ ಅನುಮೋದನೆ ದೊರೆತಿದೆ. ನಗರದ ಪ್ರಮುಖ ಪ್ರದೇಶದಲ್ಲಿ ಭವನ ನಿರ್ಮಾಣಕ್ಕಾಗಿ 0.20 ಸೆಂಟ್ಸ್‌ ಜಮೀನನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.  

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿ, ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಈ ಭವನ ನಿರ್ಮಿಸಲಾಗುತ್ತಿದೆ.  

ಜಮೀನು ಮಂಜೂರಾತಿಗೆ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಪತ್ರದ ಮೂಲಕ ಶಿಫಾರಸು ಮಾಡಿ ಬೆಂಬಲ ಸೂಚಿಸಿದ್ದರು.