ಜಿಲ್ಲೆಯಲ್ಲಿ 1.10 ಲಕ್ಷ ಪ್ರಕರಣಗಳ ಇತ್ಯರ್ಥ-15 ಕೌಟುಂಬಿಕ ಪ್ರಕರಣಗಳ ದಂಪತಿಗಳು ರಾಜಿ
1.10 lakh cases settled in the district-couples in 15 family cases reconciled
ಲೋಕದರ್ಶನ ವರದಿ
ಹಾವೇರಿ 16: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 1,24,057 ಪ್ರಕರಣಗಳಲ್ಲಿ 1,10,876 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 56,83,18,798 ಮೊತ್ತದ ರಾಜೀಯಾಗಿದೆ ಹಾಗೂ 15 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀಮಾಡಿಕೊಂಡಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರ್ಪ ಎನ್. ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 6,387 ಪ್ರಕರಣಗಳ ಪೈಕಿ 5,400 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 29,15,37,575/-ಗಳ ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 1,17,670 ಪ್ರಕರಣಗಳಲ್ಲಿ 1,05,476 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರೂ. 27,67,81,223/- ಗಳ ಮೊತ್ತದ ರಾಜೀಯಾಗಿದೆ.
ಜಿಲ್ಲೆಯ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯ ರಾಣೇಬೆನ್ನೂರಿನಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಎಕ್ಸ್ಯಿಕೂಷನ್ ನಂ.19/2020 ದಾವೆಯು ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜಿ ಸಂದಾನದ ಮೂಲಕ ಇತ್ಯರ್ಥವಾಗಿರುತ್ತದೆ.
ಹಾವೇರಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ಆರು, ರಾಣೇಬೆನ್ನೂರಲ್ಲಿ ಮೂರು, ಬ್ಯಾಡಗಿ, ಹಾನಗಲ್ ಹಾಗೂ ಶಿಗ್ಗಾಂವದಲ್ಲಿ ತಲಾ ಎರಡು ಸೇರಿ ಒಟ್ಟು 15 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜಿಮಾಡಿಕೊಂಡು ಮತ್ತೆ ಒಂದಾಗಿದ್ದಾರೆ.
ಈ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಹಾಗೂ ಜಿಲ್ಲೆಯ ಎಲ್ಲಾ ತಾಲೂಕಾ ನ್ಯಾಯವಾದಿಗಳ ಸಂಘದ ಸದಸ್ಯರು, ಹಾವೇರಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು, ಇತರೇ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ತುಂಬಾ ಯಶಸ್ವಿಯಾಗಿ ಜರುಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಅವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 