ಸಾಂಟಿಯಾಗೋ, ಜೂನ್ 6,ಚಿಲಿಯಲ್ಲಿ ಕೊರೊನಾ ವೈರಾಣು ಸೋಂಕಿತರ ಸಂಖ್ಯೆ 1,22,499 ಕ್ಕೆ ಏರಿಕೆಯಾಗಿದ್ದು ಸಾವನ್ನಪ್ಪಿದವರ ಸಂಖ್ಯೆ 1,448 ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆಕಳೆದ 24 ಗಂಟೆಗಳಲ್ಲಿ 4,207 ಹೊಸ ಪ್ರಕರಣಗಳು ಮತ್ತು 92 ಸಾವಿನ ಪ್ರಕರಣಗಳು ವರದಿಯಾಗಿವೆ. ಒಟ್ಟು ಹೊಸ ಪ್ರಕರಣಗಳ ಪೈಕಿ 3,790 ಜನರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು 417 ಜನರಲ್ಲಿ ಯಾವುದೇ ಲಕ್ಷಣಗಳಿರಲಿಲ್ಲ ಎಂದು ವರದಿಯಾಗಿದೆ.1,521 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 1,291 ಜನರಿಗೆ ವೆಂಟಿಲೇಟರ್ ವ್ಯವಸ್ಥೆ ನೀಡಲಾಗಿದೆ. 337 ಜನರ ಸ್ಥಿತಿ ಗಂಭೀರವಾಗಿದೆ.
ಕಳೆ 24 ಗಂಟೆಗಳಲ್ಲಿ 21,780 ಮಾದರಿಗಳ ಪಾಲಿಮರೇಸ್ ಚೇನ್ ರಿಯಾಕ್ಷನ್ ಪರೀಕ್ಷೆ ನಡೆಸಲಾಗಿದ್ದು ಒಟ್ಟು 6,68,556 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢಪಟ್ಟವರನ್ನು ಪ್ರತ್ಯೇಕವಾಗಿರಿಸಲು ಈವರೆಗೆ 337 ಪ್ರತ್ಯೇಕ ವಾಸಸ್ಥಳಗಳನ್ನು ನಿರ್ಮಿಸಲಾಗಿದೆ. ಅಲ್ಲಿ ಅವರಿಗೆ ವಸತಿ, ಊಟದ ವ್ಯವಸ್ಥೆಯ ಜೊತೆಗೆ ವೈದ್ಯಕೀಯ ಸೇವೆಯನ್ನೂ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಉಪ ಕಾರ್ಯದರ್ಶಿ ಅರ್ಟುರೋ ಜುನಿಂಗಾ ಹೇಳಿದ್ದಾರೆ. ಸೋಂಕಿನ ಪ್ರಕರಣಗಳು ಹೆಚ್ಚು ವರದಿಯಾಗಿರುವ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ಲಾಕ್ ಡೌನ್ ಅವಧಿಯನ್ನು ಮುಂದಿನವಾರದವರೆಗೆ ವಿಸ್ತರಿಸಲಾಗಿದೆ.