ಬೆಂಗಳೂರು, ಏ.10, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸದ್ಯ 200ರ ಗಡಿ ದಾಟಿದೆ. ರಾಜ್ಯದಲ್ಲಿ ಗುರುವಾರದಿಂದ ಶುಕ್ರವಾರ ಮಧ್ಯಾಹ್ನದವರೆಗೆ ಒಂದೇ ದಿನ 10 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ಆಧಿಕೃತ ಮಾಹಿತಿ ಪ್ರಕಾರ, ಸೋಂಕಿತರಲ್ಲಿ ಐವರು ಮೈಸೂರಿನವರಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಮತ್ತೆರಡು ಪ್ರಕರಣಗಳು ವರದಿಯಾಗಿವೆ. ಹಾಗೇ ಕಲಬುರಗಿಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಎಲ್ಲರನ್ನೂ ನಿಗದಿತ ಆಸ್ಪತ್ರೆಯಲ್ಲಿ ಕ್ವಾರಂಟೈನ್ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.
1. ರೋಗಿ ನಂಬರ್ 198: 48 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
2. ರೋಗಿ ನಂಬರ್ 199: 57 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
3. ರೋಗಿ ನಂಬರ್ 200: 8 ವರ್ಷದ ಬಾಲಕನಾಗಿದ್ದು, ರೋಗಿ ನಂಬರ್ 159 ಮತ್ತು 103(ತಂದೆ) ಸಂಪರ್ಕದಲ್ಲಿದ್ದನು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
4. ರೋಗಿ ನಂಬರ್ 201: 48 ವರ್ಷದ ಮಹಿಳೆಯಾಗಿದ್ದು, ರೋಗಿ ನಂಬರ್ 103(ಅತ್ತೆ) ಜೊತೆ ಸಂಪರ್ಕದಲ್ಲಿದ್ದರು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
5. ರೋಗಿ ನಂಬರ್ 202: 33 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 111ರ ಜೊತೆ ಸಂಪರ್ಕದಲ್ಲಿದ್ದರು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
6. ರೋಗಿ ನಂಬರ್ 203: 28 ವರ್ಷದ ಮಹಿಳೆಯಾಗಿದ್ದು, ಮೈಸೂರು ನಿವಾಸಿಯಾಗಿದ್ದಾರೆ. ಇವರು ರೋಗಿ ನಂಬರ್ 85ರ ಪತ್ನಿ. ಸದ್ಯಕ್ಕೆ ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
7. ರೋಗಿ ನಂಬರ್ 204: 48 ವರ್ಷದ ಮಹಿಳೆ, ಮೈಸೂರು ನಿವಾಸಿ, ರೋಗಿ ನಂಬರ್ 183 ರ ಪತ್ನಿ. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
8. ರೋಗಿ ನಂಬರ್ 205: 55 ವರ್ಷದ ವ್ಯಕ್ತಿಯಾಗಿದ್ದು, ಕಲಬುರಗಿ ನಿವಾಸಿ, ದೆಹಲಿಯಿಂದ ಬಂದಿದ್ದ ನೆಗೆಟಿವ್ ವರದಿ ಬಂದಿದ್ದ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
9. ರೋಗಿ ನಂಬರ್ 206 : 35 ವರ್ಷದ ವ್ಯಕ್ತಿಯಾಗಿದ್ದು, ಬೆಂಗಳೂರು ನಿವಾಸಿ, ರೋಗಿ ನಂಬರ್ 169ರ ಸಹೋದರನಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
10. ರೋಗಿ ನಂಬರ್ 207: 11 ವರ್ಷದ ಬಾಲಕಿಯಾಗಿದ್ದು, ಬೆಂಗಳೂರು ನಿವಾಸಿ, ರೋಗಿ ನಂಬರ್ 206ರ ಮಗಳಾಗಿದ್ದಾಳೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.