ಕಲಬುರಗಿ, ಮೇ 25,ಕಲಬುರಗಿ ನಗರದ ಮೋಮಿನಪುರ ಪ್ರದೇಶದ 9 ಮತ್ತು ಮಿಜಗುರಿ ಪ್ರದೇಶದ ಓರ್ವ ವ್ಯಕ್ತಿ ಒಟ್ಟು 10 ಜನ ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ಸೋಮವಾರ ಆರೋಗ್ಯ ಇಲಾಖೆಯ ಬೆಳಗಿನ ಬುಲೆಟಿನ್ ಪ್ರಕಾರ, ಕಲಬುರಗಿ ನಗರದ ಮೋಮಿನಪುರ ಪ್ರದೇಶದ 35 ವರ್ಷದ ಯುವಕ (ರೋಗಿ ಸಂಖ್ಯೆ-848),
30 ವರ್ಷದ ಮಹಿಳೆ (ರೋಗಿ ಸಂಖ್ಯೆ-953), 33 ವರ್ಷದ ಮಹಿಳೆ (ರೋಗಿ ಸಂಖ್ಯೆ-1080), 15 ವರ್ಷದ ಬಾಲಕಿ (ರೋಗಿ ಸಂಖ್ಯೆ-1081), 14 ವರ್ಷದ ಬಾಲಕಿ (ರೋಗಿ ಸಂಖ್ಯೆ-1082), 55 ವರ್ಷದ ಮಹಿಳೆ (ರೋಗಿ ಸಂಖ್ಯೆ-1083), 50 ವರ್ಷದ ಮಹಿಳೆ (ರೋಗಿ ಸಂಖ್ಯೆ-1085), 60 ವರ್ಷದ ವೃದ್ಧ (ರೋಗಿ ಸಂಖ್ಯೆ-1086), 10 ವರ್ಷದ ಬಾಲಕಿ (ರೋಗಿ ಸಂಖ್ಯೆ-1087) ಹಾಗೂ
ಮಿಜಗುರಿ ಪ್ರದೇಶದ 38 ವರ್ಷದ ಯುವಕ (ರೋಗಿ ಸಂಖ್ಯೆ-849) ಸೋಂಕಿನಿಂದ ವಾಸಿಯಾಗಿ ಬಿಡುಗಡೆಗೊಂಡಿದ್ದಾರೆ ಎಂದರು.ಜಿಲ್ಲೆಯಲ್ಲಿ ಇದುವರೆಗಿನ ಕೊರೊನಾ ಪೀಡಿತ 155 ಜನರಲ್ಲಿ 72 ಜನ ಗುಣಮುಖರಾಗಿದ್ದಾರೆ. 7 ಜನ ನಿಧನ ಹೊಂದಿದ್ದು, 76 ಜನರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.