ಸವದತ್ತಿ ತಾಲೂಕಿನಲ್ಲಿ 100 ದಿನಗಳ ಕಾನೂನು ಜಾಗೃತಿ ಅಭಿಯಾನಕ್ಕೆ ಚಾಲನೆ
100-day legal awareness campaign launched in Savadatti taluk
ಸವದತ್ತಿ 01 : ಬಾಲ್ಯ ವಿವಾಹ ಮುಕ್ತ ಭಾರತ" ನಿರ್ಮಾಣದ ಗುರಿಯೊಂದಿಗೆ ತಾಲೂಕಿನಾದ್ಯಂತ 100 ದಿನಗಳ ವಿಶೇಷ ಕಾನೂನು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸವದತ್ತಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ತಿಳಿಸಿದರು. ಸವದತ್ತಿ ನ್ಯಾಯಾಲಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಕಾನೂನು ಸೇವೆಗಳ ಸಮಿತಿಯ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮ ಹಾಗೂ ಶಾಲಾ-ಕಾಲೇಜುಗಳಲ್ಲಿ ಕಾನೂನು ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಮಾರ್ಚ್ 7 ರಂದು ತಾಲೂಕಿನ ಎಲ್ಲಾ ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಜಾಗೃತಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ. ಸಮಿತಿಯ ಪೆನಲ್ ವಕೀಲರು ಹಾಗೂ ನ್ಯಾಯವಾದಿಗಳ ಸಂಘದ ಸದಸ್ಯರು ಗ್ರಾಮ ಮಟ್ಟದಲ್ಲಿ ಕಾನೂನು ಉಪನ್ಯಾಸ ನೀಡುವ ಮೂಲಕ ಜನರಲ್ಲಿ ಅರಿವು ಮೂಡಿಸಲಿದ್ದಾರೆ. ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಪೋಕ್ಸೋ ಕಾಯ್ದೆಯ ಮಾಹಿತಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು.ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ಉಪಸ್ಥಿತರಿದ್ದರು. ಸಮಿತಿಯ ಪದಾಧಿಕಾರಿಗಳಾದ ಎಂ.ಎಸ್. ಹುಬ್ಬಳ್ಳಿ, ಎಸ್.ಎಸ್. ಕಾಳಪ್ಪನವರ, ಮಹಿಳಾ ಪ್ರತಿನಿಧಿ ಎಸ್.ವಾಯ್. ಶಿಬಾರಗಟ್ಟಿ ಹಾಗೂ ನ್ಯಾಯವಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಚರ್ಚಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 