ವಿಜಯಪುರ 29: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ 100ನೇ ಸಂಚಿಕೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಬಿಡುಗಡೆ ಮಾಡಿದರು.
ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಮ್.ಚಂದ್ರಶೇಖರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕ ಸಂದೀಪ, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಚಿತ್ರದಲ್ಲಿ ಇದ್ದಾರೆ.