ದಕ್ಷಿಣ ಕೊರಿಯಾದಲ್ಲಿ 10500 ಕೊರೊನಾ ಸೋಂಕಿತರು

ಸಿಯೋಲ್, ಏ 12 (ಸ್ಫುಟ್ನಿಕ್) ದಕ್ಷಿಣ ಕೊರಿಯಾದಲ್ಲಿ 10500 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 32 ಹೊಸ ಪ್ರಕರಣಗಳು ದಾಖಲಾಗಿದ್ದು ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೊರಿಯಾ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ.7638 ಜನರು ಚೇತರಿಸಿಕೊಂಡಿದ್ದು ಕಳೆದ 24 ಗಂಟೆಗಳಲ್ಲಿ 125 ಜನರನ್ನು ವಾಪಸ್ ಮನೆಗೆ ಕಳುಹಿಸಲಾಗಿದೆ ಎಂದೂ ಕೇಂದ್ರ ತಿಳಿಸಿದೆ.ದಕ್ಷಿಣ ಕೊರಿಯಾದಲ್ಲಿ ಸೋಂಕಿನಿಂದ 214 ಜನರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10512 ರಷ್ಟಿದೆ.ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸೋಂಕು ಸಾಂಕ್ರಾಮಿಕ ಎಂದು ಘೋಷಿಸಿತ್ತು. ಜಗತ್ತಿನಾದ್ಯಂತ ಸುಮಾರು 17 ಲಕ್ಷ ಜನರಿಗೆ ಸೋಂಕು ತಗುಲಿದ್ದು 1,08,000 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.