ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
108 Surya Namaskara on the occasion of Rathasaptami
ಮಾಂಜರಿ 04 ಪ್ರತಿದಿನ ಸೂರ್ಯ ನಮಸ್ಕಾರದ ಅಭ್ಯಾಸ ನಮ್ಮ ಅನೇಕ ಮನೋದೈಹಿಕ ಕಾಯಿಲೆಗಳನ್ನು ದೂರಗೊಳಿಸಿ ಶರೀರವನ್ನು ಸದೃಢ ಮಾಡುತ್ತದೆ ಕಾರಣ ಇಂದಿನ ಯುವಕರು ಕಡ್ಡಾಯವಾಗಿ ಸೂರ್ಯ ನಮಸ್ಕಾರವನ್ನು ತಮ್ಮ ದೈನಂದಿನ ಜೀವನ ಶೈಲಿಯ ಕ್ರಮವಾಗಿ ರೂಢಿಸಿಕೊಳ್ಳಬೇಕೆಂದು ಚಿಕ್ಕೋಡಿಯ ಕೆ ಎಲ್ ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಕಿರಣಕುಮಾರ ಮುತ್ನಾಳಿ ಹೇಳಿದರು.
ಅವರು ಚಿಕೋಡಿಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ರಥಸಪ್ತಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು 108 ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ಮಾಡಿದರು ಸಂಸ್ಕೃತ ಪ್ರಾಧ್ಯಾಪಕರಾದ ಸುದರ್ಶನ ಭಟ್ ಸೂರ್ಯ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು. ಯೋಗ ಶಿಕ್ಷಕರಾದ ಮಲ್ಲಿಕಾರ್ಜುನ ಬಚಡಿ ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ನೀಡಿದರು ಡಾ. ಜೀವನ ಕುಮಾರ್ ಗಡಗೆ ಸ್ವಾಗತ ಕೋರಿದರು, ಡಾ. ಸಂತೋಷ ಶಿವಣ್ಣವರ ವಂದಿಸಿದರು. ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 