ಬೆಂಗಳೂರು ಏ 12, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 11 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿಯಲ್ಲಿ ಇಂದು ಹೊಸದಾಗಿ ನಾಲ್ಕು ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲೆಗೂ ಕರೋನ ಸೋಂಕು ಕಾಲಿಟ್ಟಿದ್ದು ಮೊದಲ ಪ್ರಕರಣ ವರದಿಯಾಗಿದೆ . ಕಲಬುರಗಿಯಲ್ಲಿ ಎರಡು ಮತ್ತು ಮೈಸೂರಿನಲ್ಲಿ ಒಂದು ಹೊಸ ಪ್ರಕರಣದ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.