ಸ್ಯಾನ್ ಫ್ರಾನ್ಸಿಸ್ಕೊ ನಿಂದ 117 ಪ್ರಯಾಣಿಕರು ಬೆಂಗಳೂರಿಗೆ ಆಗಮನ
ಬೆಂಗಳೂರು, ಮೇ 21, ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಗುರುವಾರ ಬೆಳಿಗ್ಗೆ 8.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಂಟನೆ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 117 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಒಟ್ಟು 117 ಮಂದಿ ಪ್ರಯಾಣಿಕರಲ್ಲಿ 50 ಪುರುಷ ಮತ್ತು 67 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಬಳಿಕ ಏರ್ ಇಂಡಿಯಾ ವಿಮಾನವು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು. ಸರ್ಕಾರದ ನಿರ್ದೇಶನದಂತೆ, 117 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. 117 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಅವರೇ ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 