ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರ 118ನೇ ಜನ್ಮದಿನ: ಎಐಡಿವೈಓ ಕಾರ್ಯಕ್ರಮ
118th Birth Anniversary of Great Revolutionary Bhagat Singh: AIDYO Program
ಧಾರವಾಡ 28: ಎಐಡಿವೈಓ ದಿಂದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ರ 118ನೇ ಜನ್ಮದಿನ ಆಚರಣೆ ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತ ನಿರ್ಮಾಣ ಯುವಜನರ ಗುರಿಯಾಗಬೇಕು. -ಭವಾನಿ ಶಂಕರ್ ಎಸ್ ಗೌಡ, ಜಿಲ್ಲಾಧ್ಯಕ್ಷರು, ಎಐಡಿವೈಓ, ಧಾರವಾಡ ಭಾರತ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಧೀರ ಹುತಾತ್ಮ ಭಗತ್ ಸಿಂಗ್ ಅವರ 118ನೇ ಜನ್ಮದಿನದ ಅಂಗವಾಗಿ ಇಂದು ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಧಾರವಾಡ ಜಿಲ್ಲಾ ಸಮಿತಿಯಿಂದ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಮೈದಾನದಲ್ಲಿ ಯುವಜನರ ಮಧ್ಯೆ ಕಾರ್ಯಕ್ರಮ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭಗತ್ ಸಿಂಗ್ ರ ಭಾವಚಿತ್ರಕ್ಕೆ ಎಲ್ಲ ಯುವಜನರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಐಡಿವೈಓ ಜಿಲ್ಲಾಧ್ಯಕ್ಷರಾದ ಭವಾನಿ ಶಂಕರ್ ಎಸ್ ಗೌಡ ಮಾತನಾಡಿ, ಭಗತ್ ಸಿಂಗ್ ರ ಜನ್ಮದಿನದ ಸಂದರ್ಭದಲ್ಲಿ ಅವರ ಹೋರಾಟದ ಬದುಕು, ಆದರ್ಶ ಹಾಗೂ ವೈಚಾರಿಕತೆಯನ್ನು ಅರ್ಥಮಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಅವರು ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಸ್ವತಂತ್ರ ಹೋರಾಟಕ್ಕೆ ಧುಮುಕಿದರು. 1917ರಲ್ಲಿ ರಷ್ಯಾದಲ್ಲಿ ನಡೆದ ಸಮಾಜವಾದಿ ಕ್ರಾಂತಿಯಿಂದ ಸ್ಫೂರ್ತಿ ಪಡೆದಿದ್ದ ಭಗತ್ ಸಿಂಗ್, ಕೇವಲ ಬ್ರಿಟಿಷರನ್ನು ಭಾರತದಿಂದ ಹೊಡೆದೋಡಿಸಿದರೆ ಸಾಲದು, ಸ್ವಾತಂತ್ರ್ಯದ ನಂತರ ಭಾರತವನ್ನು ಬಂಡವಾಳಗಾರರ ಕೈವಶವಾಗದಂತೆ ನೋಡಿಕೊಂಡು ಶೋಷಣೆರಹಿತ ಸಮಾಜಕ್ಕಾಗಿ, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಜೀವನ ಭದ್ರತೆ ಖಾತ್ರಿಪಡಿಸಲು ಸಮಾಜವಾದಿ ಕ್ರಾಂತಿಯನ್ನು ನೆರವೇರಿಸುವ ಆಶಯ ಹೊಂದಿದ್ದರು.
ಆದರೆ ಭಗತ್ ಸಿಂಗ್ ರ ಆಶಯಗಳು ಈಡೇರಲಿಲ್ಲ.ದೇಶದಲ್ಲಿ ಬಂಡವಾಳಶಾಹಿ ವ್ಯವಸ್ಥೆ ಅಸ್ತಿತ್ವಕ್ಕೆ ಬಂದು ಜನಸಾಮಾನ್ಯರ ಬದುಕು ಹೈರಾಣಾಗಿದೆ. ಸ್ವತಂತ್ರ ನಂತರ ಅಧಿಕಾರಕ್ಕೆ ಬಂದ ಎಲ್ಲ ಪಕ್ಷಗಳು ಬಂಡವಾಳಗಾರರ ಹಿತಾಸಕ್ತಿಯನ್ನೇ ಕಾಪಾಡುತ್ತ ಬಂದಿವೆ. ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಸಂಪೂರ್ಣ ಖಾಸಗಿಕರಣಗೊಂಡು ಜನಸಾಮಾನ್ಯರ ಕೈಗೆಟುಕದಂತಾಗಿವೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳು ಜನರನ್ನು ಬಾಧಿಸುತ್ತೇವೆ. ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಮಿತಿಮೀರಿವೆ. ಇಂತಹ ಜನ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತದಂತೆ ಯುವಜನರನ್ನು ಅಶ್ಲೀಲತೆ, ಮಧ್ಯಪಾನ, ಆನ್ಲೈನ್ ಗೇಮ್ ಗಳು, ಬೆಟ್ಟಿಂಗ್, ಡ್ರಗ್ಸ್ ಹೀಗೆ ಹಲವಾರು ದುಶ್ಚಟಗಳಿಗೆ ದಾಸರಾಗುವಂತೆ ಪಿತೂರಿ ನಡೆಸಲಾಗುತ್ತಿದೆ. ಹಾಗೆಯೇ ಇನ್ನೊಂದೆಡೆ ಯುವಜನರನ್ನು ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿ ಒಡೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವಜನರು ಈ ಎಲ್ಲಾ ಹಿತೂರಿಗಳನ್ನು ಸೋಲಿಸಿ ಉನ್ನತ ನೈತಿಕತೆ, ಚಾರಿತ್ರ್ಯವನ್ನು ಬೆಳೆಸಿಕೊಂಡು ಭಗತ್ ಸಿಂಗ್ ರ ಆಶಯವಾದ ಶೋಷಣೆ ರಹಿತ ಸಮಾಜವಾದಿ ಭಾರತ ನಿರ್ಮಾಣದ ದಿಕ್ಕಿನಲ್ಲಿ ಶ್ರಮಿಸುವುದು, ಭಗತ್ ಸಿಂಗ್ ಗೆ ನಿಜವಾದ ಗೌರವ ಸಲ್ಲಿಸಿದಂತೆ ಎಂದು ಹೇಳಿದರು.ಈ ಸಂಧರ್ಭದಲ್ಲಿ ಎಐಡಿವೈಓ ಜಿಲ್ಲಾ ಸಂಘಟನಾಕಾರರಾದ ಪ್ರೀತಿ ಸಿಂಗಾಡಿ, ಪ್ರತಾಪ್ ಸಿಂಗ್ ಜಾದವ್ ಸೇರಿದಂತೆ ಯುವಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ವಂದನೆಗಳೊಂದಿಗೆ,ಸುದ್ದಿ ಇವರಿಂದ,ಪ್ರೀತಿ ಸಿಂಗಾಡಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 