ಜುಗೂಳ ಕೆಎಸ್‌ಎಸ್ ಪ್ರೌಢಶಾಲೆಯಲ್ಲಿ 11ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆ
11th International Yoga Day celebrated at Jugoola KSS High School
ಕಾಗವಾಡ, 21 ; ತಾಲೂಕಿನ ಜುಗೂಳ ಗ್ರಾಮದ ಕರ್ನಾಟಕ ಶಿಕ್ಷಣ ಸಮಿತಿಯ ಪ್ರೌಢ ಶಾಲೆಯಲ್ಲಿ ಶನಿವಾರ ದಿ. 21 ರಂದು ಬೆಳಿಗ್ಗೆ 11 ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆಯ ನಿಮಿತ್ಯ ಮಕ್ಕಳಿಗೆ ಯೋಗಾಭ್ಯಾಸ ಹೇಳಿ ಕೊಡಲಾಯಿತು.
ಯೋಗ ಗುರು ಮೋಹನ ಜಾಧವ ಆಗಮಿಸಿದ್ದ ಅತಿಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳನ್ನು ಪ್ರದರ್ಶನ ಮಾಡಿ, ಯೋಗಾಸನದ ವಿವಿಧ ಬಗೆಗಳನ್ನು ತಿಳಿಸಿಕೊಟ್ಟರು.
ಕೆಎಸ್‌ಎಸ್ ಅಧ್ಯಕ್ಷ ವಿಲಾಸ ಕಡೋಲೆ ಮಾತನಾಡಿ, ಆರೋಗ್ಯವಂತ ಶರೀರಕ್ಕಾಗಿ ಯೋಗಾಭ್ಯಾಸ ಬಹಳ ಮುಖ್ಯವಾಗಿದ್ದು, ಹಿರಿಯರು ಮಕ್ಕಳು ಎಲ್ಲರೂ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯವಂತರಾಗಿರಬಹುದು. ಭಾರತೀಯ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗಕ್ಕೆ ಇಂದು ವಿಶ್ವವೇ ತಲೆಬಾಗಿದ್ದು, ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಸಸಿಗೆ ನೀರೇರೆಯುವ ಮೂಲಕ ಚಾಲನೆ ನೀಡಲಾಯಿತು. ನಂತರ ಅತಿಥಿಗಳನ್ನು ಮತ್ತು ಯೋಗ ಗುರುಗಳನ್ನು ಸನ್ಮಾನಿಸಲಾಯಿತು.
ಈ ವೇಳೆ ಶಾಲೆಯ ಚೇರಮನ್ನ ವ್ಹಿ.ಎಂ. ಕಡೋಲೆ, ಜುಗೂಳ ಗ್ರಾ.ಪಂ. ಅಧ್ಯಕ್ಷ ಕಾಕಾಸಾಬ ಪಾಟೀಲ ಯೋಗಗುರು ಮೋಹನ ಜಾಧವ, ಮುಖ್ಯಾಧ್ಯಾಪಕ ಎಂ.ಸಿ. ಹೂಗಾರ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 