12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಆರಂಭ
12-day special yoga program begins
ವಿಜಯಪುರ 12: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶರೀರ ವಿಜ್ಞಾನ ವಿಭಾಗದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರದಲ್ಲಿ ಯೋಗ ಸಂಗಮ: ಯೋಗ ಸಮಾವೇಶ ಶಿರ್ಷಿಕೆಯಡಿ 12 ದಿನಗಳ ವಿಶೇಷ ಯೋಗ ಕಾರ್ಯಕ್ರಮ ಬುಧವಾರ ಪ್ರಾರಂಭವಾಯಿತು.
ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ ಮತ್ತು ಕೇಂದ್ರ ಆಯುಷ್ ಸಚಿವಾಲಯ ಸಹಯೋಗದಲ್ಲಿ ಪ್ರಾರಂಭವಾಗಿರುವ ಈ ಶಿಬಿರದಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ಸಾಮಾನ್ಯ ಯೋಗ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ.
ಯೋಗ ಶಿಕ್ಷಕರಾದ ಮಡಿವಾಳಪ್ಪ ದೊಡ್ಡಮನಿ ಮತ್ತು ಕಾರ್ಯಕ್ರಮ ಸಂಯೋಜಕಿ ಡಾ. ಜ್ಯೋತಿ ಖೋದ್ನಾಪುರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು. ಇದೇ ತಿಂಗಳು ಜೂ. 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಒಂದು ಭೂಮಿ, ಒಂದು ಆರೋಗ್ಯ ಎಂಬ ಉದ್ದೇಶದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 