ರಾಜಸ್ತಾನದ ನಗೌರ್ನಲ್ಲಿ ಮಿನಿ ಬಸ್ ಉರುಳಿ 12 ಸಾವು; 6 ಮಂದಿಗೆ ಗಾಯ

ನಾಗೌರ .23  ಮಿನಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿರುವ ಘಟನೆ ರಾಜಸ್ತಾನದ ನಗೌರ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ರಸ್ತೆಯ ಮೇಲೆ ಅಡ್ಡ ಬಂದ ಗೂಳಿಯೊಂದನ್ನು ರಕ್ಷಿಸಲು ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ದುರಂತ ಸಂಭವಿಸಿದೆ. ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿನಿ ಬಸ್ ಮಹಾರಾಷ್ಟ್ರದಿಂದ ರಾಜಸ್ತಾನದ ಅಜ್ಮೀರ್ ಜಿಲ್ಲೆಯ ಹನುಮಾನ್ಗರ್ಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕುಚಮಾನ್ನ ಸಕರ್ಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ನಾಲ್ವರನ್ನು ಜೈಪುರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.