ಬೆಂಗಳೂರು, ಮೇ, 27, ರಾಜ್ಯದಲ್ಲಿ ಇಂದು ಹೊಸದಾಗಿ 122 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಇವರಲ್ಲಿ 762 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 1596 ಆಗಿದೆ.
ಇಂದು ಹೊಸದಾಗಿ 122 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ. ಇವರಲ್ಲಿ 762 ಮಂದಿ ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಮನೆಗೆ ವಾಪಸ್ ಹೋಗಿದ್ದಾರೆ. ಇಂದು ಕಲಬುರ್ಗಿ - 28 , ಉತ್ತರ ಕನ್ನಡ - 06, ಚಿಕ್ಕಮಗಳೂರು - 03, ದಕ್ಷಿಣ ಕನ್ನಡ - 11, ಯಾದಗಿರಿ - 16, ಹಾಸನ-14, ಉಡುಪಿ-09, ಬೆಂಗಳೂರು ನಗರ -06, ಬೆಂಗಳೂರು ಗ್ರಾಮಾಂತರ -02, ಬಳ್ಳಾರಿ -01, ಬೀದರ್-12, ಬೆಳಗಾವಿ-04, ರಾಯಚೂರು-05, ವಿಜಯಪುರ-02, ಮಂಡ್ಯ-01, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.ಇದುವರೆಗೆ 45 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, 762 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.