ರಾಜ್ಯದಲ್ಲಿ 125 ಜನರಿಗೆ ಕೊರೋನಾ ಸೋಂಕು; ಮಾಹಿತಿ ಪಡೆಯಲು ಸರ್ಕಾರದಿಂದ ಆ್ಯಪ್ ಬಿಡುಗಡೆ
ಬೆಂಗಳೂರು, ಏ 3, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಒಟ್ಟು 125 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶುಕ್ರವಾರ ಬಾಗಲಕೋಟೆ ಜಿಲ್ಲೆಯ 75 ವರ್ಷದ ವೃದ್ಧನಲ್ಲಿ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದು, 11 ಜನರು ಚೇತರಿಕೆ ಕಂಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಮಾ. 31ರಂದು ನಿವೃತ್ತಿ ಹೊಂದಬೇಕಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನು ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಏಪ್ರಿಲ್ ಅಂತ್ಯದಲ್ಲಿ ನಿವೃತ್ತಿ ಹೊಂದಬೇಕಿದ್ದವರ ಸೇವೆಯನ್ನು 2 ತಿಂಗಳ ಕಾಲ ವಿಸ್ತರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೋನಾ ನಿಗಾ ವಹಿಸಲು ಸರ್ಕಾರ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿದ್ದು, ಅದನ್ನು www.karnataka.gov.in ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಅದರಿಂದ ರೋಗಿಗಳ ಪ್ರಯಾಣದ ಹಿನ್ನೆಲೆ ಮತ್ತು ಸಹಾಯವಾಣಿ ಸಂಖ್ಯೆ ಸೇರಿದಂತೆ ಇತರ ಮಾಹಿತಿಗಳು ಲಭ್ಯವಾಗುತ್ತವೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 