ಜೂ. 21 ರಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
12th International Yoga Day on June 21
ಬೆಳಗಾವಿ 19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (2026) ಯನ್ನು ಜೂನ್ 21 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಘನ ಉಪಸ್ಥಿತಿವಹಿಸುವರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಗಾವಿ ಗ್ರಾಮೀಣ (ವಿಧಾನಸಭೆ) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ ಮುಖ್ಯ ಅತಿಥಿಯಾಗಿ ಆಗಮಿಸುವರು.
ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ನವದೆಹಲಿ-2 ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷ ಬರಮಗೌಡ ಕಾಗೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಅಧ್ಯಕ್ಷ ಬರಮಣ್ಣ ಉಪ್ಪಾರ ವಿಶೇಷ ಆಮಂತ್ರಿತರಾಗಿ ಆಗಮಿಸುವರು.
ರಾಜ್ಯಸಭೆ ಸಂಸದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಸಂಸದ ಜಗದೀಶ ಶೆಟ್ಟರ್, ಉತ್ತರ ಕನ್ನಡ ಲೋಕಸಭಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು. ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 