ಶ್ರಮಿಕ ರೈಲಿನ ಮೂಲಕ ಪಶ್ಚಿಮ ಬಂಗಾಳದತ್ತ 1318 ವಲಸಿಗರು ಪಯಣ

ಬಳ್ಳಾರಿ,ಮೇ 30: ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1318 ಜನ ಪಶ್ಚಿಮ ಬಂಗಾಳ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಪಶ್ಚಿಮಬಂಗಳಾದತ್ತ ಶನಿವಾರ ಮಧ್ಯಾಹ್ನ ತೆರಳಿತು.

ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ,ಪ್ರೋಬೆಷನರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿವೈಎಸ್ಪಿ ರಾಮರಾವ್ ಸೇರಿದಂತೆ ಅನೇಕರು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ ಮತ್ತೇ ಬಳ್ಳಾರಿ ಜಿಲ್ಲೆಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭಹಾರೈಸಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

      ಬಳ್ಳಾರಿ,ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಪಶ್ಚಿಮಬಂಗಾಳ ರಾಜ್ಯದ 1318 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲುವಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ ಅವರಿಗೆ ಟೋಕನ್ ನೀಡಲಾಗಿತ್ತು. ಆ ವಲಸಿಗರನ್ನು  ಅವರಿಗೆ ನೀಡಲಾದ ಟೋಕನ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.

   ಈ ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ನಾಲ್ಕು ಬಿಸ್ಕಟ್ ಪ್ಯಾಕೇಟ್,ಎರಡು ಬ್ರೇಡ್ ಪ್ಯಾಕ್,ನಾಲ್ಕು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿಚರ್ಿ ಬಜಿ ಹಾಗೂ ಇನ್ನೀತರ ಆಹಾರ ಸಾಮಗ್ರಿಗಳ ಆಹಾರ ಕಿಟ್ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು.

   ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್ಕ್ರಾಸ್ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್ಗಳು ಹಾಗೂ ಲಘು ಉಪಹಾರ ವಿತರಿಸಿದರು.ಪಶ್ಚಿಮಬಂಗಾಳ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು.

    ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ,ಪ್ರೋಬೆಷನರಿ ಐಎಎಸ್ ಈಶ್ವರ್ ಕಾಂಡೂ,ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಎಎಸ್ಪಿ ಲಾವಣ್ಯ ಅವರು ಸ್ಥಳದಲ್ಲಿಯೇ ಉಪಸ್ಥಿತರಿದ್ದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ  ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ವಲಸಿಗರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಸೋಮಶೇಖರ ಬಂಕದ್, ಜಿಲ್ಲಾ ಕಾಮರ್ಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಅಲ್ತಾಫ್, ತಹಸೀಲ್ದಾರ್ ನಾಗರಾಜ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಅಕ್ಷರದಾಸೋಹ ಕಾಮರ್ಿಕರಿಗೆ ಗೌರವಧನ ಪಾವತಿಸುವಂತೆ ಮನವಿ