ದೇಶದಲ್ಲಿ 24 ಗಂಟೆಗಳಲ್ಲಿ 14,821 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜೂನ್ 22, ದೇಶದಲ್ಲಿ ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 14,821 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸುಮಾರು 10 ಸಾವಿರ ಜನ ರೋಗದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4,25,282 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ, ಈ ಕಾಯಿಲೆಯಿಂದಾಗಿ 445 ಸಾವುಗಳು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 13,699 ಕ್ಕೆ ಏರಿದೆ. ಇನ್ನು 9,437 ರೋಗಿಗಳು ಕೊರೊನಾ ಮುಕ್ತರಾಗಿದ್ದಾರೆ. ಒಟ್ಟಾರೆ ದೇಶದಲ್ಲಿ 2,37,196 ರೋಗಿಗಳು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಪ್ರಸ್ತುತ 1,74,387 ಕರೋನಾ ಸೋಂಕಿನ ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 3870 ಕೊರೊನಾ ವೈರಸ್ ಸೋಂಕು ಬೆಳಕಿಗೆ ಬಂದಿದ್ದು, 186 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,32,075 ಕ್ಕೆ ಮತ್ತು ಸತ್ತವರ ಸಂಖ್ಯೆ 6170 ಕ್ಕೆ ಏರಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ, ಒಟ್ಟು 3000 ಹೊಸ ಪ್ರಕರಣಗಳು ವರದಿಯಾಗಿ ಒಟ್ಟು ಸೋಂಕಿತರ ಸಂಖ್ಯೆ 59,746 ಕ್ಕೆ ಏರಿದೆ. ಇದೇ ಅವಧಿಯಲ್ಲಿ 63 ರೋಗಿಗಳು ಮೃತ ಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ತಮಿಳುನಾಡು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59,377 ತಲುಪಿದೆ ಮತ್ತು ಇಲ್ಲಿಯವರೆಗೆ 757 ಜನರು ವೈರಸ್‌ನಿಂದ ಸಾವನ್ನಪ್ಪಿದ್ದಾರೆ.