ಮೈಸೂರು, ಎ 11,ಮೈಸೂರಿನಲ್ಲಿ ಇಂದು ಹೊಸದಾಗಿ 5 ಕರೋನ ಸೋಂಕಿನ ಪ್ರಕರಣ ದೃಡಪಟ್ಟಿದ್ದು ಇದು ನಾಗರಿಕರಲ್ಲಿ ಆತಂಕ ಇನ್ನಷ್ಟು ಹೆಚ್ಚಿಸಿದೆ. ಇದರೊಂದಿಗೆ ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಪುರಾಣ ಸ್ಥಳ ನಂಜನಗೂಡಿನ ಜ್ಯುಬಿಲಿಯೆಂಟ್ ಫಾರ್ಮಾ ಹೌಸ್ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸಿದೆ.ನಂಜನಗೂಡು ತಾಲೂಕಿನಾದ್ಯಂತ ಜಿಲ್ಲಾಡಳಿತ ಇನ್ನು 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಿದೆ. ರಾಜ್ಯದಲ್ಲಿ ಇಂದು ಮತ್ತೆ 7 ಮಂದಿಯಲ್ಲಿ ಮಾರಕ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಫೈಕಿ ಐವರು ಸೋಂಕಿತರು ನಂಜನಗೂಡಿನ ಜ್ಯುಬಿಲಿಯೆಂಟ್ ಫಾರ್ಮ್ ಹೌಸ್ ನ ನೌಕರರಾಗಿದ್ದಾರೆ. ಇವರೆಲ್ಲರಿಗೂ ಮೈಸೂರಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ನಂಜನಗೂಡಿನ ಜ್ಯುಬಿಲಿಯೆಂಟ್ ಫಾರ್ಮಾ ಹೌಸ್ ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸಿದೆ. ಒಟ್ಟು 47 ಸೋಂಕಿತರ ಪೈಕಿ 35 ಮಂದಿಗೆ ಇಲ್ಲಿಂದಲೇ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಳಿದವರು ದೆಹಲಿಯ ಧಾರ್ಮಿಕ ಸಭೆಗೆ ಹೋಗಿ ಬಂದವರಾಗಿದ್ದಾರೆ. ನಂಜನಗೂಡಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಜಾಗ್ರತೆಯಾಗಿ ತಾಲೂಕಿನಾದ್ಯಂತ ಇನ್ನು 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗಿದೆ .ಇದರೊಂದಿಗೆ ರಾಜ್ಯ ಸರಕಾರದ ಆದೇಶದಂತೆ ತಾಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೂ ದಿನದಿಂದ ದಿನಕ್ಕೆ ಕರೋನ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ನಂಜನಗೂಡು ನಗರ ಹಾಗೂ ಅದಕ್ಕೆ ಹೊಂದಿಕೊಂಡಂತಿರುವ ಬಡಾವಣೆಗಳನ್ನು ಕ್ಲಸ್ಟರ್ ಘಟಕಗಳೆಂದು ಘೋಷಿಸಿ ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇನ್ನು ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜನರಿಗೆ ಅಗತ್ಯ ಎಚ್ಚರಿಕೆ ನೀಡಲಾಗಿದೆ.