ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ
ಬೆಂಗಳೂರು, ಮೇ 10,ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಬರುವವರು ನಗರವನ್ನು ಪ್ರವೇಶಿಸುತ್ತಿದ್ದಂತೆಯೇ ಅವರ ವಿವರ ಪಡೆದು ಅವರ ಕೈಗಳಿಗೆ ಮುದ್ರೆ ಹಾಕಲಾಗುತ್ತಿದೆ. ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಬೇಕು ಹೊರಗಡೆ ಎಲ್ಲೂ ಅಡ್ಡಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ. ಈ ನಿಯಮ ಶುಕ್ರವಾರದಿಂದಲೇ ಜಾರಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ, ಹೊರ ರಾಜ್ಯದಿಂದ ಬರುವವರು ನಿಗದಿಪಡಿಸಿರುವ ಹೋಟೆಲ್ ಅಥವಾ ವಿದ್ಯಾರ್ಥಿನಿಲಯಗಳನ್ನು ಆಯ್ಕೆ ಮಾಡಿಕೊಂಡು 14 ದಿನ ಕಾಲ ಕ್ವಾರಂಟೈನ್ ಗೆ ಒಳಪಡಬೇಕು. ಆ ಹೋಟೆಲ್‌ಗಳ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ. ಆರ್ಥಿಕವಾಗಿ ಶಕ್ತರಲ್ಲದವರಿಗೆ ಹಾಸ್ಟೆಲ್‌ಗಳಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಹಾಸ್ಟೆಲ್‌ಗಳಲ್ಲಿ ಉಚಿತ ಊಟ ಒದಗಿಸಲಾಗುತ್ತದೆ.ಪಂಚತಾರಾ ಹೋಟೆಲ್‌ಗಳಿಗೆ, ಇತರ ಐಷಾರಾಮಿ ಹೋಟೆಲ್‌ಗಳಿಗೆ ಹಾಗೂ ಮಾಮೂಲಿ ಹೋಟೆಲ್‌ಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಇದು ಮಾಮೂಲಿ ದರಕ್ಕಿಂತ ತುಂಬಾ ಕಡಿಮೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 