ಬಳ್ಳಾರಿ,ಮೇ 16: ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1452 ಜನ ಬಿಹಾರಿ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಬಿಹಾರದತ್ತ ಶನಿವಾರ ಸಂಜೆ ತೆರಳಿತು.ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್,ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಅವರನ್ನು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ ಮತ್ತೇ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭಹಾರೈಸಿ ಬೀಳ್ಕೊಟ್ಟರು.
ಬಳ್ಳಾರಿ,ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆಯಿಂದಲೇ ವಿಶೇಷ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ 840 ರೂ.ಗಳ ಟಿಕೆಟ್ನ್ನು ನೀಡಿ ರೈಲ್ವೆ ನಿಲ್ದಾಣಕ್ಕೆ ಬಸ್ಗಳ ಮೂಲಕ ಅವರನ್ನು ತಂದುಬಿಡಲಾಯಿತು. ಆ ವಲಸಿಗರನ್ನು ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ತಿಳಿಸುತ್ತಿದ್ದರು.
ಈ ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬ್ರೇಡ್ ಪ್ಯಾಕ್,ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿಚರ್ಿ ಬಜಿ ಹಾಗೂ ಇನ್ನೀತರ ಆಹಾರ ಸಾಮಗ್ರಿಗಳ ಆಹಾರ ಕಿಟ್ಗಳನ್ನು ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ವತಿಯಿಂದ ವಿತರಿಸಲಾಯಿತು.
ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್ಕ್ರಾಸ್ ಸಂಸ್ಥೆಯವರು ಮಾಸ್ಕ್ಗಳನ್ನು ವಿತರಿಸಿದರು.
ತಮ್ಮ ರಾಜ್ಯದ ಕಡೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು.
ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಬಿಹಾರದ ಸಹಸ್ರಾಗೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯಾಗಿರಲಿದೆ.
ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.
ಈಗ ಒಂದು ರೈಲು ಬಿಹಾರ ರಾಜ್ಯಕ್ಕೆ ತೆರಳುತ್ತಿದ್ದು,ಇನ್ನೂ ಬಿಹಾರಕ್ಕೆ ವಲಸಿಗರು ತೆರಳುವುದಿದ್ದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಉತ್ತರ ಪ್ರದೇಶಕ್ಕೆ ಎರಡು ರೈಲುಗಳು ಮೇ 17ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ಮತ್ತು ಬಳ್ಳಾರಿ ರೈಲು ನಿಲ್ದಾಣದ ಮೂಲಕ ಉತ್ತರ ಪ್ರದೇಶದ ವಲಸಿಗರು ತೆರಳಲಿದ್ದಾರೆ ಎಂದು ವಿವರಿಸಿದ ಅವರು ಈಗಾಗಲೇ ಅವರೆಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಟಿಕೆಟ್ ಸಹ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಸೋಮಶೇಖರ ಬಂಕದ್ ಮತ್ತಿತರರು ಇದ್ದರು.
ಅಡಚಣೆ ರಹಿತ ವಿದ್ಯುತ್ ನೀಡಲು ಜೆಸ್ಕಾಂ ಬದ್ಧ