ಅಕ್ರಮವೆಸಗಿದ 146 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಕೆ.ಗೋಪಾಲಯ್ಯ
ಹಾವೇರಿ, ಏ.29, ಲಾಕ್‌ಡೌನ್ ಸಮಯದಲ್ಲಿ ಬಡವರಿಗೆ ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ ರಾಜ್ಯದ 146 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದುಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.ಹಾವೇರಿ ನಗರದಲ್ಲಿರುವ ಕೆ.ಎಫ್.ಸಿ.ಎಸ್.ಸಿ. ಗೋಡೌನ್‍ಗೆ ಭೇಟಿ ನೀಡಿದ ಪಡಿತರ ಅಕ್ಕಿ ಹಾಗೂ ತೊಗರಿಬೇಳೆ ದಾಸ್ತಾನು ಪರಿಶೀಲನೆ ನಡೆಸಿದ ಬಳಿಕ ಅವರು ಈ ವಿಷಯ ತಿಳಿಸಿದರು.ಕೊರೋನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಡಿತರದಾರರಿಗೆ ಆಹಾರ ಸಾಮಗ್ರಿಗಳ ವಿತರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ತರುವಾಯು ಅಕ್ಕಿ ಮತ್ತು ತೊಗರಿಬೇಳೆಯ ಗುಣಮಟ್ಟ ಕುರಿತಂತೆ ಖುದ್ದಾಗಿ ಪರಿಶೀಲಿಸಲು ಗೋಡೌನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಪಡಿತರ ದಾಸ್ತಾನಿಗಾಗಿ ಪ್ರತ್ಯೇಕವಾದ ಗೋಡೌನ್ ನಿರ್ಮಾಣದ ಅವಶ್ಯಕತೆ ಇದ್ದು, ಕನಿಷ್ಟ ಐದಾರು ಎಕರೆ ಭೂಮಿಯನ್ನು ಗುರುತಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 