ಸಿಂಗಾಪುರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 148 ಪ್ರಯಾಣಿಕರು
ಬೆಂಗಳೂರು, ಮೇ 23,ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 7.45ಕ್ಕೆ ಸಿಂಗಾಪುರದಿಮದ 148 ಅನಿವಾಸಿ ಭಾರತೀಯರನ್ನು ವಿಶೇಷ ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ.ಇದು ಇಲ್ಲಿಯವರೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿಮೂರನೇ ಏರ್ ಇಂಡಿಯಾ ವಿಮಾನವಾಗಿದೆ.ಆಗಮಿಸಿದ 148 ಮಂದಿ ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಇಬ್ಬರು ಮಕ್ಕಳು ಸೇರಿದಂತೆ 82 ಪುರುಷರು ಮತ್ತು 66 ಮಹಿಳೆಯರು ಇದ್ದಾರೆ. ಇವರೆಲ್ಲರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಎಲ್ಲರನ್ನೂ 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 