ನೀಟ್ 2026ರಲ್ಲಿ 150ನೇ ರ್ಯಾಂಕ್: ಎನ್. ಸಾಯಿ ಶ್ರಾವ್ಯಗೆ ಬಿಡಿಸಿಸಿಐ ಅಭಿನಂದನೆ
150th Rank in NEET 2026: BDCCI Congratulates N. Sai Shravya
ಬಳ್ಳಾರಿ, ಜು.31: ನೀಟ್ 2026 ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 150ನೇ ರ್ಯಾಂಕ್ ಗಳಿಸಿದ ಬಳ್ಳಾರಿಯ ವಿದ್ಯಾರ್ಥಿನಿ ಎನ್. ಸಾಯಿ ಶ್ರಾವ್ಯ ಅವರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಾಯಿ ಶ್ರಾವ್ಯ ಅವರನ್ನು ಅಭಿನಂದಿಸಿ, ವೈದ್ಯಕೀಯ ಶಿಕ್ಷಣದಲ್ಲಿ ಇನ್ನಷ್ಟು ಸಾಧನೆ ಮಾಡಿ ಸಮಾಜಸೇವೆಗೆ ತಮ್ಮನ್ನು ಸಮರ್ಿಸಿಕೊಳ್ಳುವಂತೆ ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿದ ಸಾಯಿ ಶ್ರಾವ್ಯ ಮಾತನಾಡಿ, ಬಿಡಿಸಿಸಿಐ ವತಿಯಿಂದ ದೊರೆತ ಗೌರವದಿಂದ ಸಂತಸವಾಗಿದೆ. ಮುಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಸಮಾಜಕ್ಕೆ ಸೇವೆ ಸಲ್ಲಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿಡಿಸಿಸಿಐ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಉಪಾಧ್ಯಕ್ಷ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಖಜಾಂಚಿ ಸಿ.ಎಸ್. ಸತ್ಯನಾರಾಯಣ, ಮಾಜಿ ಅಧ್ಯಕ್ಷ ಬಿ. ಮಹಾರುದ್ರಗೌಡ, ಸಿ. ಶ್ರೀನಿವಾಸರಾವ್, ಡಾ. ಡಿ.ಎಲ್. ರಮೇಶ್ ಗೋಪಾಲ್ ಸೇರಿದಂತೆ ಸಂಸ್ಥೆಯ ವಿವಿಧ ಸಮಿತಿಗಳ ಅಧ್ಯಕ್ಷರು, ವಿಶೇಷ ಆಹ್ವಾನಿತರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 