ಮುಂಬೈ, ಮೇ 21, ಕರೋನಾ ಸೊಂಕು ಮತ್ತು ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ 7 ಲಕ್ಷಕ್ಕು ಹೆಚ್ಚು ಕಾರ್ಮಿಕರಿಗೆ ಸರ್ಕಾರ 153 ಕೋಟಿರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ಕಾರ್ಮಿಕ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ. ಹೇಳಿಕೆಯ ಪ್ರಕಾರ, ಮೇ 20 ರವರೆಗೆ ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ಮಹಾರಾಷ್ಟ್ರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 7ಲಕ್ಷದ 67,ಸಾವಿರ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಪ್ರತಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ 2,000 ರೂ. ಹಣವನ್ನು ಜಮೆ ಮಾಡಲಾಗಿದೆ ಎಂದರು.
ಲಾಕ್‌ಡೌನ್ ಅವಧಿಯಲ್ಲಿ ತೊಂದರೆಗೆ ಒಳಗಾದ ಕಾರ್ಮಿಕರ ಖಾತೆಗಳಿಗೆ ಸರ್ಕಾರ 153.40 ಕೋಟಿ ರೂ.ಪಾಯಿಗಳನ್ನು ನೇರ ವರ್ಗಾವಣೆ ಮಾಡಲಾಗಿದೆ ಎಂದೂ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.