1542 ಪ್ರಕರಣಗಳು ಲೋಕ ಅದಾಲತನಲ್ಲಿ ಇತ್ಯರ್ಥ
1542 cases settled in Lok Adalat
ರಾಯಬಾಗ, 14 : ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ಪಕ್ಷಗಾರರು ರಾಜಿ ಸಂಧಾನ ಮೂಲಕ ಲೋಕ ಅದಾಲತನಲ್ಲಿ ಇತ್ಯರ್ಥ ಪಡಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಶನಿವಾರ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಬೃಹತ್ತ ಲೋಕ ಅದಾಲತನಲ್ಲಿ ಪಕ್ಷಗಾರರನ್ನು ಮತ್ತು ವಕೀಲರನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೆ ಯಾವದೇ ತಂಟೆ ತಕರಾರು ಉದ್ಭವಿಸುವುದಿಲ್ಲ. ಲೋಕ ಅದಾಲತ ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ, ಸಮಯ ಮತ್ತು ಹಣ ಉಳಿತಾಯ ಆಗುತ್ತದೆ ಎಂದರು.
ಇವತ್ತು ಒಟ್ಟು 1542 ಪ್ರಕರಣಗಳನ್ನು ಲೋಕ ಅದಾಲತ ನಲ್ಲಿ ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರೀಯಾ ಭಟ್ಟಡ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ ಹಾಗೂ ವಕೀಲರು ಮತ್ತು ಪಕ್ಷಗಾರರು, ನ್ಯಾಯಾಲಯದ ಸಿಬ್ಬಂದಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 